ನಾಳೆ (ಎ.23) SSLC ಫಲಿತಾಂಶ ಪ್ರಕಟ

Picture of Savistara

Savistara

Bureau Report

ಬೆಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶಎ.23ರ ಗುರುವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.ಗುರುವಾರ ಮಧ್ಯಾಹ್ನ 12 ಗಂಟೆಗೆ 2026 ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಸಚಿವರು ಪತ್ರಿಕಾ ಗೋಷ್ಠಿಯನ್ನು ಆಯೋಜಿಸಿದ್ದಾರೆ.

ಈ ಫಲಿತಾಂಶವನ್ನು https://karresults.nic.in ಅಥವಾ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ (DigiLocker) ಮೂಲಕ ಎ.23ರ ಗುರುವಾರ ಮಧ್ಯಾಹ್ನ 12 ಗಂಟೆಯ ಬಳಿಕ htt ps://www.digilocker.gov.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳವ Video link https://tinyurl.com/mw84wmh9 ತಿಳಿದುಕೊಳ್ಳಬಹುದು .

ಸಂಬಂಧಿತ ಶಾಲೆಗಳಿಗೆ ಫಲಿತಾಂಶ ಪಟ್ಟಿ ಎ.23ರ ಗುರುವಾರ ಮಧ್ಯಾಹ್ನ 12 ಲಭ್ಯವಿರಲಿದೆ ಎಂದು ಪ್ರಕಟಣೆ ತಿಳಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!