ಎಸ್‌ಎಸ್‌ಎಲ್ಸಿ ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

Picture of Savistara

Savistara

Bureau Report

ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ ಮತ್ತು ಉತ್ತರ ಕನ್ನಡ ತೃತೀಯ ಸ್ಥಾನ ಪಡೆದು ಸಾಧನೆ ಮಾಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 98.40ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ. ಉಡುಪಿ ಜಿಲ್ಲೆ ಶೇ 98.18 ರ ಫಲಿತಾಂಶದೊಂದಿಗೆ 2ನೇ ಸ್ಥಾನದಲ್ಲಿದೆ. ಉತ್ತರ ಕನ್ನಡ 3ನೇ ಸ್ಥಾನ (ಶೇ 98.09), ಹಾಸನ 4ನೇ ಸ್ಥಾನ (ಶೇ 97.51) ಗಳಿಸಿವೆ. ಕಲಬುರಗಿ ಕೊನೆಯ ಸ್ಥಾನದಲ್ಲಿದೆ.ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ ನೀಡಿದರು. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ದಾಖಲೆಯ ಫಲಿತಾಂಶ ಬಂದಿದೆ ಎಂದು ಸಚಿವರು ತಿಳಿಸಿದರು.

7 ಮಂದಿ ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.ಮಂಡ್ಯ 5ನೇ ಸ್ಥಾನ (ಶೇ 97.45), ಶಿರಸಿ 6ನೇ ಸ್ಥಾನ (ಶೇ 97.21), ಹಾವೇರಿ 7ನೇ ಸ್ಥಾನ (ಶೇ 96.87), ಕೊಡಗು 8ನೇ ಸ್ಥಾನ (8 96.70), ಶಿವಮೊಗ್ಗ 9ನೇ ಸ್ಥಾನ (ಶೇ 96.56), ವಿಜಯನಗರ 10ನೇ ಸ್ಥಾನ (ಶೇ 96.39), ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ (ಶೇ 95.84), ಧಾರವಾಡ 12ನೇ ಸ್ಥಾನ (ಶೇ 95.59), ಕೋಲಾರ 13ನೇ ಸ್ಥಾನ (ಶೇ 95.50) ಗಳಿಸಿವೆ. ಬಾಗಲಕೋಟೆ 14ನೇ ಸ್ಥಾನ – 95.42%, ಬೆಂ.ಉತ್ತರ 15ನೇ ಸ್ಥಾನ – 95.34%, ಗದಗ 16ನೇ ಸ್ಥಾನ -95.24%, ಚಿಕ್ಕಮಗಳೂರು 17ನೇ ಸ್ಥಾನ – 94.99% ಸ್ಥಾನ ಪಡೆದಿವೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವಿಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!