ಲೆಬನಾನ್ ಮೇಲೆ ಇಸ್ರೇಲ್ ದಾಳಿ; ಕನಿಷ್ಠ 14 ಮಂದಿ ಮೃತ್ಯು

Picture of Savistara

Savistara

Bureau Report

ಬೈರೂತ್ : ಇಸ್ರೇಲ್ ಮತ್ತು ಹಿಜ್ಜುಲ್ಲಾ ನಡುವಿನ ಕದನ ವಿರಾಮ ವಿಸ್ತರಣೆಯ ನಡುವೆಯೇ ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 14 ಮಂದಿ ಮೃತಪಟ್ಟು, ಇತರ 37 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ.ಹಿಜ್ಜುಲ್ಲಾ ನಡೆಸಿದ ಪ್ರತಿದಾಳಿಯಲ್ಲಿ ಇಸ್ರೇಲ್ ಸೈನಿಕ ಮೃತಪಟ್ಟಿದ್ದಾಗಿ ಇಸ್ರೇಲ್ ಹೇಳಿಕೊಂಡಿದೆ. ಸಾರ್ಜೆಂಟ್ ಇದಾನ್ ಫಕ್ಸ್ (19) ಅವರು ದಕ್ಷಿಣ ಲೆಬನಾನ್ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದಾರೆ. ಒಬ್ಬ ಅಧಿಕಾರಿ ಹಾಗೂ ಇತರ ಮೂವರು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಇತರ ಇಬ್ಬರು ಸೈನಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಅಧಿಕೃತ ಪ್ರಕಟಣೆ ಹೇಳಿದೆ.

ಯುದ್ಧ ಮುಂದುವರಿಯುವ ಕಾರ್ಮೋಡದ ನಡುವೆಯೇ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಫ್ಟಿ ಸೋಮವಾರ ರಷ್ಯಾದ ಅಧ್ಯಕ್ಷ ವ್ಯಾದಿಮಿರ್ ಪುಟಿನ್‌ ಅವರನ್ನು ಸೇಂಟ್ ಪೀಟರ್ಸ್ ಬರ್ಗ್ ನಲ್ಲಿ ಭೇಟಿ ಮಾಡಿ ಯುದ್ಧ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಪಾಶ್ಚಿಮಾತ್ಯ ಆರ್ಥಿಕ ದಿಗಂಧನಕ್ಕೆ ಒಳಗಾಗಿರುವ ಉಭಯ ದೇಶಗಳು ಇತ್ತೀಚಿನ ವರ್ಷಗಳಲ್ಲಿ ನಿಕಟವಾದ ಸಂಬಂಧವನ್ನು ಬೆಳೆಸಿಕೊಂಡಿವೆ.ರಷ್ಯಾದ ಎರಡನೇ ಅತಿದೊಡ್ಡ ನಗರದಲ್ಲಿ ಉಭಯ ಗಣ್ಯರ ಮಾತುಕತೆ ನಡೆಯಲಿದೆ ಎಂದು ಟೆಹರಾನ್ ರಾಯಭಾರಿ ಕಝೀಮ್ ಜಲಾಲಿ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!