ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಚಾಲನೆ

Picture of Savistara

Savistara

Bureau Report

ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು,

ಮಂಗಳೂರು ಕಾವೂರು ಮೂಲದ ಮುಗೆರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯವರು ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಮೇಲ್ವಿಚಾರಣೆಯಲ್ಲಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಶ್ರೀ ಹರೀಶ್ ಪೂಂಜ ಅವರು, “ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಈ ರಸ್ತೆ ಕಾಮಗಾರಿಯಿಂದ ಈ ಭಾಗದ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಲಭಿಸಿ, ದೈನಂದಿನ ಜೀವನಕ್ಕೆ ಹೆಚ್ಚಿನ ಅನುಕೂಲವಾಗಲಿದೆ” ಎಂದು ತಿಳಿಸಿದ್ದಾರೆ.ಇದೇ ವೇಳೆ ಕಾಮಗಾರಿಗೆ ಸಾರ್ವಜನಿಕರು ಸಹಕಾರ ನೀಡುವಂತೆ ಅವರು ವಿನಂತಿಸಿದರು

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!