ಮೇ 1ರಿಂದ ಜಾರಿಗೆ ಬರುವಂತೆ ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟವಾದ OPEC ನಿಂದ ಹೊರಬರುವುದಾಗಿ UAE ಘೋಷಣೆ

Picture of Savistara

Savistara

Bureau Report

ದುಬೈ: ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟವಾದ OPEC(Organization of the Petroleum Exporting Countries)ನಿಂದ ಮೇ 1ರಿಂದ ಜಾರಿಗೆ ಬರುವಂತೆ ಹೊರಬರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮಂಗಳವಾರ ಘೋಷಿಸಿದೆ.ಯುಎಇ ತನ್ನ ಸರ್ಕಾರಿ ಸ್ವಾಮ್ಯದ WAM ಸುದ್ದಿ ಸಂಸ್ಥೆಯ ಮೂಲಕ ಈ ನಿರ್ಧಾರವನ್ನು ಪ್ರಕಟಿಸಿದೆ.ಈ ಕುರಿತು ಪ್ರತಿಕ್ರಿಯಿಸಿರುವ UAE, “ಈ ನಿರ್ಧಾರವು ದೇಶದ ದೀರ್ಘಕಾಲೀನ ಕಾರ್ಯತಂತ್ರ ಮತ್ತು ಆರ್ಥಿಕ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ದೇಶೀಯ ಇಂಧನ ಉತ್ಪಾದನೆಯಲ್ಲಿ ವೇಗವಾಗಿ ಹೂಡಿಕೆ ಹೆಚ್ಚಿಸುವುದು ಮತ್ತು ಇಂಧನ ಕ್ಷೇತ್ರದಲ್ಲಿ ನಡೆಯುತ್ತಿರುವ ಬದಲಾವಣೆಗಳಿಗೆ ಹೊಂದಿಕೊಳ್ಳುವುದು ಇದರ ಉದ್ದೇಶವಾಗಿದೆ” ಎಂದು ತಿಳಿಸಿದೆ.”ಈ ಕ್ರಮದಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಯುಎಇ ಜವಾಬ್ದಾರಿಯುತ ಮತ್ತು ವಿಶ್ವಾಸಾರ್ಹ ದೇಶವಾಗಿ ತನ್ನ ಪಾತ್ರವನ್ನು ಇನ್ನಷ್ಟು ಬಲಪಡಿಸಲಿದೆ. ಭವಿಷ್ಯದ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಇಂಧನ ಕ್ಷೇತ್ರದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸುವುದೇ ಇದರ ಉದ್ದೇಶ” ಎಂದೂ ಹೇಳಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!