ಇಂದು ( ಎ.29) : ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕಿ ರೋಗದ ನಿರ್ವಹಣಾ ಕ್ರಮಗಳ ಸಂವಾದ | ದ.ಕ ಸಂಸದ ಕ್ಯಾ.ಚೌಟ ಭಾಗಿ

Picture of Savistara

Savistara

Bureau Report

ಸುಳ್ಯ : ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ಸಮುದಾಯ ಮಟ್ಟದಲ್ಲಿ ಕೈಗೊಳ್ಳಲಾಗುತ್ತಿರುವ ನಿರ್ವಹಣಾ ಕ್ರಮಗಳ ಪ್ರಾತ್ಯಕ್ಷತೆಗೆ ಒಂದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಿ.ಪಿ.ಸಿ.ಆರ್.ಐ ವತಿಯಿಂದ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಇಂದು (ಎ.29) ರಂದು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಯೋಜನೆ ಪ್ರಾರಂಭವಾಗಿ ಒಂದು ವರ್ಷವಾದ ಸಲುವಾಗಿ ಸಂವಾದ ಕಾರ್ಯಕ್ರಮವನ್ನು ಗುತ್ತಿಗಾರು ಕೃಷಿ ಪತ್ತಿನ ಸಹಕಾರ ಸಂಘದ ದೀನ ದಯಾಳ್ ರೈತ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ ಸಂಸದರಲ್ಲದೆ, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಸಿ ಪಿ ಸಿ ಆರ್ ಐ ಸಂಸ್ಥೆಯ ಪಂಚವಾರ್ಷಿಕ ಪರಿಶೀಲನಾ ಕಮಿಟಿಯ ಅಧ್ಯಕ್ಷರಾಗಿರುವ ಡಾ. ಟಿ. ಜಾನಕಿರಾಮ್ ಮತ್ತು ಇತರ ಸದಸ್ಯರು, ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ, ಗುತ್ತಿಗಾರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಮತ್ತು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ಭಾಗವಹಿಸಲಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!