ಶಿವಮೊಗ್ಗ : ಶ್ರೀ ಪಶುಪತಿನಾಥ ಪಂಚಮುಖಿ ಶಿವಲಿಂಗದ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಧರ್ಮಸಭೆ

Picture of Savistara

Savistara

Bureau Report

ಶಿವಮೊಗ್ಗ ಜಿಲ್ಲೆಯ ವೀರಶೈವ ಸಂಸ್ಕೃತಿ ಭವನದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಪಶುಪತಿನಾಥ ಪಂಚಮುಖಿ ಶಿವಲಿಂಗದ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಧರ್ಮಸಭೆಯಲ್ಲಿ ಸಂಸದ ರಾಘವೇಂದ್ರ ಬಿ ವೈ ಪಾಲ್ಗೊಂಡರು.

ಕಾರ್ಯಕ್ರಮವು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದ ಪೂಜ್ಯ ಜಗದ್ಗುರು ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಪವಿತ್ರ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.

ಬೀಳಕಿಯ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆಯ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಎಡಿಯೂರಿನ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಈ ಪುಣ್ಯ ಕಾರ್ಯಕ್ರಮದಲ್ಲಿ ಪೂಜ್ಯ ಜಗದ್ಗುರುಗಳ ಆಶೀರ್ವಾದ ಪಡೆದು, ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರು, ವೀರಶೈವ ಸಂಘದ ಪದಾಧಿಕಾರಿಗಳು ಹಾಗೂ ಸಹಸ್ರಾರು ಸಂಖ್ಯೆಯ ಭಕ್ತಾದಿಗಳು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!