ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

Picture of Savistara

Savistara

Bureau Report

ಸುಳ್ಯ ಭಾ.ಕೃ.ಸಂ.ಪ. ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ಸಿ.ಪಿ.ಸಿ.ಆ‌ರ್.ಐ.), ಕಾಸರಗೋಡು ಮತ್ತುಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗುತ್ತಿಗಾರು ಆಶ್ರಯದಲ್ಲಿ “ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ” ಎ.29 ರಂದು ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾಭವನದಲ್ಲಿ ನಡೆಯಿತು.ಮಾಹಿತಿ ಮತ್ತು ಸಂವಾದ ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಟಿ. ಜಾನಕಿರಾಮ್ ಮಾಡಿದರು. ವೇದಿಕೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಕ್ಯಾಂಪ್ಕೋ ಅಧ್ಯಕ್ಷ ಸತೀಶ್ಚಂದ್ರ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ, ಅಖಿಲ ಭಾರತ ಅಡಿಕೆ ಬೆಳೆಗಾರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ,ಡಾ. ಕೆ.ಬಿ ಹೆಬ್ಬಾರ್, ಡಾ. ವಿನಾಯಕ ಹೆಗ್ಡೆ ವೇದಿಕೆಯಲ್ಲಿದ್ದರು.ಡಾ. ಕೆ.ಬಿ ಹೆಬ್ಬಾರ್ ಪ್ರಸ್ತಾವಿಕ ಮಾತುಗಳಾನ್ನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ದ.ಕ ಜಿಲ್ಲೆಯನ್ನು ಕೇಂದ್ರೀಕರಿಸಿ ಸಿ.ಪಿ.ಸಿ‌.ಆರ್ .ಐ, ಅಡಿಕೆ ಬೆಳೆಯುವ ಕ್ಷೇತ್ರದ ಶಾಸಕರು, ಕ್ಯಾಂಪ್ಕೋ, ಸಹಕಾರಿ ಸಂಘಗಳ ಅಧ್ಯಕ್ಷರನ್ನು ಸೇರಿ ಸಭೆ ಕರೆದು ಕೃಷಿ ಬಗ್ಗೆ ಸಮಗ್ರ ಬೆಳವಣಿಗಳನ್ನು ಚರ್ಚಿಸಲು ಸಭೆ ಕರೆಯುತ್ತೇನೆ ನಾವು ರೈತನ್ನು ಸೇರಿಸಿ ಕೃಷಿ ವಿಚಾರದಲ್ಲಿ ಶಿಕ್ಷಣ ಕೊಡಬೇಕಾಗಿದೆ. ಅಡಿಕೆ ಜೊತೆಯಲ್ಲಿ ಪರ್ಯಾಯ ಕೃಷಿ ಗೆ ದ.ಕ ಜಿಲ್ಲೆಯ ರೈತರೇ ಮುಂದೆ ಬರಬೇಕು ಎಂದು ಹೇಳಿದರು.ಬಳಿಕ ಡಾ.ವಿನಾಯಕ ಹೆಗ್ಡೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ನೀಡಿದರು.ಬೆಳಗ್ಗೆ ನಡುಗಲ್ಲು ಮತ್ತು ಚನಿಲದ ಎಲೆಚುಕ್ಕೆ ರೋಗ ನಿರ್ವಹಣಾ ಪ್ರಾತ್ಯಕ್ಷಿಕೆ ತೋಟಗಳಿಗೆ ಕ್ಷೇತ್ರ ಭೇಟಿ ನಡೆಯಿತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!