ಯೋಗೀಶ್ ಗೌಡ ಕೊಲೆ ಪ್ರಕರಣ| ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದುಗೊಳಿಸಿದ ಸ್ಪೀಕರ್ ಖಾದರ್

Picture of Savistara

Savistara

Bureau Report

ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ಈಗಾಗಲೇ ತಾಂತ್ರಿಕವಾಗಿ ರದ್ದಾಗಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸಭಾಧ್ಯಕ್ಷರ ಪಾತ್ರ ಮತ್ತು ನಿಯಮಗಳ ಕುರಿತು ಎದ್ದಿರುವ ಗೊಂದಲಗಳಿಗೆ ತೆರೆ ಎಳೆದರು.“ಯಾವುದೇ ಒಬ್ಬ ಜನಪ್ರತಿನಿಧಿಯು ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾದ ತಕ್ಷಣ, ನಿಯಮಗಳ ಪ್ರಕಾರ ಅವರ ಶಾಸಕ ಸ್ಥಾನ ತಾನಾಗಿಯೇ ರದ್ದಾಗುತ್ತದೆ.

ಇದನ್ನು ರದ್ದು ಮಾಡುವ ವಿಶೇಷ ಅಧಿಕಾರ ಸಭಾಧ್ಯಕ್ಷರಿಗಿಲ್ಲ. ಒಂದು ವೇಳೆ ನ್ಯಾಯಾಲಯವು ಈ ಶಿಕ್ಷೆಗೆ ತಡೆಯಾಜ್ಞೆ ನೀಡಿದರೆ ಮಾತ್ರ ಅವರ ಸದಸ್ಯತ್ವ ಮರುಸ್ಥಾಪನೆಯಾಗುತ್ತದೆ,” ಎಂದು ಯು.ಟಿ. ಖಾದರ್ ವಿವರಿಸಿದರು.ಶಾಸಕರನ್ನು ಅನರ್ಹಗೊಳಿಸುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪವನ್ನು ಸಭಾಧ್ಯಕ್ಷರು ತಳ್ಳಿಹಾಕಿದರು. “ಅನರ್ಹತೆ ವಿಚಾರದಲ್ಲಿ ಪಕ್ಷಪಾತ ಮಾಡುವ ಪ್ರಶ್ನೆಯೇ ಇಲ್ಲ. ಶಾಸಕ ಸ್ಥಾನ ರದ್ದಾದ ಮೇಲೆ ಅವರು ಸದನಕ್ಕೆ ಬರಲು ಸಾಧ್ಯವಿಲ್ಲ. ಈ ಕಾನೂನು ಅರಿವಿಲ್ಲದವರಿಗೆ ನಾನು ಮಾಹಿತಿ ನೀಡುತ್ತಿದ್ದೇನೆ ಅಷ್ಟೇ,” ಎಂದು ಅವರು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದರು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!