ಅಲ್ಪಸಂಖ್ಯಾತರು ವಾಸಿಸುವ ಕಾಲೋನಿ ಅಭಿವೃದ್ಧಿಗೆ ಸಂಪುಟ ಅಸ್ತು-ಮೈನಾರಿಟಿ ಮನವೊಲಿಕೆಗೆ ₹600 ಕೋಟಿ ಯೋಜನೆ

Picture of Savistara

Savistara

Bureau Report

ದಾವಣಗದೆ ಬೈಎಲೆಕ್ಷನ್ ದಂಗಲ್ ಬಳಿಕ ಅಸಮಾಧಾನ ಗೊಂಡಿರುವ ಮುಸ್ಲಿಂ ಸಮುದಾಯವನ್ನು ಸಮಾಧಾನ ನಡಿಸುವ ಪ್ರಯತ್ನವಾಗಿ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ. ರಾಜ್ಯದ ನಾನಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ಕಾಲೋನಿಗಳನ್ನು 600 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ನಿರ್ಧರಿಸಿದೆ. ಈ ಸಂಬಂಧ ಕ್ರಿಯಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಸಂಪುಟ ಸಭೆ ತೀರ್ಮಾನಿಸಿತು.

ಕೆಎಸ್‌ಟಿಡಿಸಿಗೆ ಕರ್ನಾಟಕ ಛತ್ರ ನಿರ್ವಹಣೆ ಹೊಣೆ:

ಆಂಧ್ರ ಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ಛತ್ರದ ಕೊಠಡಿಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ರಾಜ್ಯ ಪ್ರವಾಸೋದ್ಯಮ ನಿಗಮಕ್ಕೆ ವಹಿಸುವ ತೀರ್ಮಾನ ವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಸದ್ಯ ತಿರುಮಲದಲ್ಲಿರುವ ಕರ್ನಾಟಕ ಛತ್ರದಲ್ಲಿನ ಕೊಠಡಿಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಮುಜರಾಯಿ ಇಲಾಖೆ ಮಾಡುತ್ತಿದೆ. ಇನ್ನು ಮುಂದೆ ಮುಜರಾಯಿ ಇಲಾಖೆ ಬದಲಿಗೆ ಕೆಎಸ್ ಟಿಡಿಸಿಗೆ ಕಾರ್ಯಾಚರಣೆ- ನಿರ್ವಹಣೆ ವಹಿಸುವ ಪ್ರಸ್ತಾವಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ.

ಇಲಾಖಾ ವಿಚಾರಣೆಗೆ ನಿರ್ಧಾರ: ಪುತ್ತೂರು ತಾಲೂಕಿನಆಡಳಿತ ವೈದ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ ಅವರ ವಿರುದ್ಧ 1984ರ ಕರ್ನಾಟಕ ಲೋಕಾಯುಕ್ತ ಕಾಯಿದೆಯ ಕಲಂ 12(3)ರಡಿ ಲೋಕಾಯುಕ್ತರು ಮಾಡಿರುವ ಶಿಫಾರಸನ್ನು ತಿರಸ್ಕರಿಸಿ ಇಲಾಖೆಯಿಂದಲೇ ಇಲಾಖಾ ವಿಚಾರಣೆ ಸಂಪುಟ ಸಭೆ ನಿರ್ಧರಿಸಿದೆ.

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ

ಗುರುವಾಯನಕೆರೆಯಿಂದ ಉಪ್ಪಿನಂಗಡಿಗಾಗಿರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ.ಗುರುವಾಯನಕೆರೆಯಿಂದ ಉಪ್ಪಿನಂಗಡಿ ವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವು ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಕ್ಕೆ ಹಾಗೂ ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯಾಗಿದೆ. ಈಗಾಗಲೇ ರಸ್ತೆಯ 9.50ಕಿ.ಮೀ. ಉದ್ದ ಚತುಷ್ಪಥರಸ್ತೆಯಾಗಿದೆ. ಉಳಿಕೆ ಭಾಗದಲ್ಲಿ ಲಭ್ಯವಿರುವ ಅನುದಾನಕ್ಕೆ ಅನುಗುಣವಾಗಿ 1.270 ಕಿ.ಮೀ. ಚತುಷ್ಪಥ ರಸ್ತೆ, ಆಯ್ದ ಭಾಗಗಳಲ್ಲಿ ತಡೆಗೋಡೆ, ಕಾಂಕ್ರಿಟ್ ಚರಂಡಿ ನಿರ್ಮಾಣ, ಭೂಸ್ವಾಧೀನ ವೆಚ್ಚಕ್ಕೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ರಾಜ್ಯ ಸಚಿವ ಸಂಪುಟ 13 ಕೋಟಿ ವೆಚ್ಚದಲ್ಲಿ ಈ ಹೆದ್ದಾರಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!