BSY ಅಭಿಮಾನೋತ್ಸವ: ರಾಜಕೀಯ ಲಾಭದಾಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ; ವಿಜಯೇಂದ್ರ

Picture of Savistara

Savistara

Bureau Report

ಮೈಸೂರು: ‘ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಳ್ಳಲಾಗಿರುವ ‘ಬಿಎಸ್‌ವೈ ಅಭಿಮಾನೋತ್ಸವ’ದಿಂದ ರಾಜಕೀಯ ಲಾಭ ಪಡೆಯುವ ಆಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ.ವಿಜಯೇಂದ್ರ ಹೇಳಿದರು.

ಇಲ್ಲಿನ ಸುತ್ತೂರು ಮಠದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಶನಿವಾರ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.’ಕರ್ನಾಟಕದಲ್ಲಿ ಕೆಲವರು ಅದೃಷ್ಟದಿಂದ ಮುಖ್ಯಮಂತ್ರಿ ಆಗಿದ್ದಾರೆ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಅದೃಷ್ಟದಿಂದ ಮುಖ್ಯಮಂತ್ರಿ ಆದವರಲ್ಲ. ಸತತ ಹೋರಾಟದಿಂದ ಆ ಸ್ಥಾನ ಗಳಿಸಿದವರು. 50 ವರ್ಷಗಳ ರಾಜಕಾರಣದಲ್ಲಿ 45 ವರ್ಷ ಹೋರಾಟವನ್ನೇ ಮಾಡಿದ್ದಾರೆ. ಇದನ್ನು ಸ್ಮರಿಸುವ ಕಾರಣದಿಂದ ನಾವು ಸಮಾವೇಶ ನಡೆಸುತ್ತಿದ್ದೇವೆ’ ಎಂದರು.’ವಿಧಾನಸಭೆ ಚುನಾವಣೆಗೆ ಆರು ತಿಂಗಳಿದೆ ಎನ್ನುವಾಗ ಸಮಾವೇಶ ನಡೆಸಿದ್ದರೆ, ರಾಜಕೀಯ ಲಾಭದ ಲೆಕ್ಕಾಚಾರ ಹಾಕಬಹುದಿತ್ತು. ಈಗ ಆ ರೀತಿಯ ಪ್ರಶ್ನೆ ಉದ್ಭವಿಸುವುದಿಲ್ಲ. ರಾಜಕಾರಣಿಗಳ ಜೊತೆಗೆ, ರಾಜ್ಯದ ಬಹುತೇಕ ಮಠಾಧೀಶರೂ ಭಾಗವಹಿಸುತ್ತಾರೆ. ಸಮಾವೇಶದ ಸಂದೇಶ ಏನೆಂಬುದು ಅದು ಮುಗಿದ ಬಳಿಕ ಗೊತ್ತಾಗಲಿದೆ. 10 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆಯಲ್ಲಿದ್ದೇವೆ’ ಎಂದು ತಿಳಿಸಿದರು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!