ದಾವಣಗೆರೆ : ಬಿಎಸ್ ವೈ ಅಭಿಮಾನೋತ್ಸವ ನಿಮಿತ್ತ ಪೂರ್ವಭಾವಿ ಸಭೆ

Picture of Savistara

Savistara

Bureau Report

ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ “ಅಭಿಮಾನೋತ್ಸವ” ಕಾರ್ಯಕ್ರಮದ ಯಶಸ್ಸಿನ ನಿಮಿತ್ತ ಇಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

ಜನಸಾಮಾನ್ಯರ ಮತ್ತು ರೈತರ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ ಯಡಿಯೂರಪ್ಪನವರ ಅಭಿಮಾನಿಗಳು ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡುವ ಕುರಿತು ಮತ್ತು ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಈ ಸಂದರ್ಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಚಿತ್ರದುರ್ಗದ ಈ ಅಭಿಮಾನೋತ್ಸವವು ಕೇವಲ ಒಂದು ಸಮಾರಂಭವಲ್ಲ, ಇದು ನಮ್ಮ ನಾಯಕರಿಗೆ ಸಲ್ಲಿಸುವ ಗೌರವದ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು ಮತ್ತು ಅಭಿಮಾನಿಗಳು ಒಗ್ಗಟ್ಟಾಗಿ ಕೆಲಸ ನಿರ್ವಹಿಸುವ ಮೂಲಕ ಈ ಸಮಾವೇಶವನ್ನು ಐತಿಹಾಸಿಕವಾಗಿಸಲು ನಿರ್ಧರಿಸಲಾಯಿತು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!