ಶೃಂಗೇರಿ | ಅಂಚೆ ಮತಗಳ ಮರು ಎಣಿಕೆ ವಿವಾದ : ಮೂರು ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದ ಡಿ.ಎನ್. ಜೀವರಾಜ್

Picture of Savistara

Savistara

Bureau Report

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ತಡರಾತ್ರಿಯವರೆಗೆ ಮುಂದುವರಿದಿದ್ದು, ಫಲಿತಾಂಶದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಪ್ರತಿಕ್ರಿಯೆ ನೀಡಿದ್ದು, ಕಳೆದ ಮೂರು ವರ್ಷಗಳಿಂದ ನಡೆಸಿದ ಸುದೀರ್ಘ ಕಾನೂನು ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದು ತಿಳಿಸಿದ್ದಾರೆ.2023ರ ಮೇ 13ರಂದು ಆರಂಭವಾದ ಈ ಹೋರಾಟವು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಮಟ್ಟದವರೆಗೂ ಸಾಗಿದ್ದು, ನಿರಂತರವಾಗಿ ನ್ಯಾಯಕ್ಕಾಗಿ ಪ್ರಯತ್ನಿಸಲಾಗಿದೆ ಎಂದು ಅವರು ಹೇಳಿದರು. ಶನಿವಾರ ಬೆಳಿಗ್ಗೆಯಿಂದಲೇ ಮರುಎಣಿಕೆ ಪ್ರಕ್ರಿಯೆ ಆರಂಭವಾದಾಗ ಅದನ್ನು ತಡೆಯಲು ಪ್ರಯತ್ನಗಳು ನಡೆದವು ಎಂಬ ಆರೋಪವನ್ನೂ ಅವರು ಮಾಡಿದ್ದಾರೆ.

ಕೊನೆಯಲ್ಲಿ ಸತ್ಯಕ್ಕೆ ಜಯ ಸಿಕ್ಕಿದ್ದು, ಸಂವಿಧಾನದ ಆಶಯ ಎತ್ತಿಹಿಡಿಯಲಾಗಿದೆ ಎಂದು ಜೀವರಾಜ್ ಹೇಳಿದ್ದಾರೆ.ಮಧ್ಯಾಹ್ನ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, ಮರುಎಣಿಕೆ ಪ್ರಕ್ರಿಯೆ ಮಧ್ಯಾಹ್ನ ಸುಮಾರು 3:45ರ ವೇಳೆಗೆ ಆರಂಭವಾಗಿದ್ದರೂ, ಅದಕ್ಕೂ ಮುನ್ನವೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿರುವುದು ಆಶ್ಚರ್ಯಕರ ಎಂದು ಹೇಳಿದ್ದಾರೆ.ಇದೇ ವೇಳೆ, ಅಸಿಂಧುಗೊಂಡ ಮತಗಳನ್ನು ಗಣನೆಗೆ ತೆಗೆದುಕೊಳ್ಳುವಲ್ಲಿ ನಡೆದಿರುವ ಲೋಪದೋಷಗಳನ್ನೂ ಅವರು ಉಲ್ಲೇಖಿಸಿದ್ದಾರೆ.ಇಡೀ ಮರುಎಣಿಕೆ ಪ್ರಕ್ರಿಯೆ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಬಿಗಿ ಭದ್ರತೆಯ ನಡುವೆ ನಡೆದಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!