2026ರ ಪಂಚರಾಜ್ಯ ಚುನಾವಣೆ ಫಲಿತಾಂಶ; ಬಂಗಾಳದಲ್ಲಿ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಿಂಗ್ ಮೇಕರ್? DMKಗೆ ಭಾರೀ ಹಿನ್ನೆಡೆ

Picture of Savistara

Savistara

Bureau Report

ನವದೆಹಲಿ: 2026ರ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶದ (Election results) ಮತ ಎಣಿಕೆ ಭರದಿಂದ ಸಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಆರಂಭಿಕವಾಗಿ ಬಿಜೆಪಿ, ಕೇರಳದಲ್ಲಿ ಯುಡಿಎಫ್ ಮುನ್ನಡೆ ಸಾಧಿಸಿದ್ದು​, ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಅದ್ಭುತ ಚೊಚ್ಚಲ ಪ್ರವೇಶದಿಂದ ಭರ್ಜರಿ ಮುನ್ನಡೆ ಸಾಧಿಸಿದ್ದು, ಡಿಎಂಕೆ ಹಿನ್ನಡೆ ಅನುಭವಿಸಿದೆ.

ಬೆಳಗ್ಗೆ 10 ಗಂಟೆಯ ಟ್ರೆಂಡ್ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 166 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ದಾಪುಗಾಲು ಇಟ್ಟಿದೆ. ಆಡಳಿತರೂಢ ತೃಣಮೂಲ ಕಾಂಗ್ರೆಸ್ 111 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನೂ ಕಾಂಗ್ರೆಸ್ ಕೇವಲ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡು ಚುನಾವಣೆಯಲ್ಲಿ ಈ ಭಾರಿ ಬದಲಾವಣೆಯ ಗಾಳಿ ಬೀಸಿದ್ದು, ದಳಪತಿ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಪಕ್ಷವೂ ತನ್ನ ಚೊಚ್ಚಲ ಚುನಾವಣೆಯಲ್ಲಿ ಆರಂಭಿಕವಾಗಿ ಭರ್ಜರಿ ಮುನ್ನಡೆ ಸಾಧಿಸಿದ್ದು, 100 ಸ್ಥಾನಗಳ ಗಡಿ ದಾಟಿದೆ. ಆಡಳಿತರೂಢ ಡಿಎಂಕೆ ಭಾರಿ ಹಿನ್ನಡೆ ಅನುಭವಿಸಿದ್ದು 59 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ವಿಪಕ್ಷ ಎಐಎಡಿಎಂಕೆ 79 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!