ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಕಲ್ಲಟ್ರ ಮಾಹಿನ್ ಹಾಜಿಗೆ ಭರ್ಜರಿ ಜಯ

Picture of Savistara

Savistara

Bureau Report

ಕಾಸರಗೋಡು: ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಲ್ಲಟ್ರ ಮಾಹಿನ್ ಹಾಜಿಯವರು ತನ್ನ ಸಮೀಪದ ಪ್ರತಿಸ್ಪರ್ಧಿ, ಎನ್ ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿಯವರನ್ನು 22,698 ಮತಗಳ ಅಂತರದಿಂದ ಸೋಲಿಸಿದ್ದಾರೆ.ಎಲ್ಲಾ 16 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಾಗ ಕಲ್ಲಟ್ರ ಮಾಹಿನ್ ಹಾಜಿ 76,396 ಮತಗಳನ್ನು ಗಳಿಸಿದ್ದರೆ, ಎಂ.ಎಲ್‌. ಅಶ್ವಿನಿ 53,698 ಗಳಿಸಲಷ್ಟೇ ಶಕ್ತರಾಗಿದ್ದಾರೆ. ಎಲ್ ಡಿಎಫ್ ಅಭ್ಯರ್ಥಿ ಶಾನ್ ವಾಝ್ ಪಾದೂರು 36,678 ಮತಗಳನ್ನು ಗಳಿಸಿ ತೃತೀಯ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.ಚುನಾವಣೆ ಆಯೋಗವು ಕಲ್ಲಟ್ರ ಮಾಹಿನ್ ಹಾಜಿಯವರ ಗೆಲುವನ್ನು ಇನ್ನಷ್ಟೇ ಅಧಿಕೃತವಾಗಿ ಘೋಷಿಸಬೇಕಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!