“ಮೋದಿ ನಾಯಕತ್ವ ಭಾರತಕ್ಕೆ ಅದೃಷ್ಟ”: ಬಂಗಾಳದಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿಗೆ ಪ್ರಧಾನಿಯನ್ನು ಅಭಿನಂದಿಸಿದ ಟ್ರಂಪ್‌

Picture of Savistara

Savistara

Bureau Report

ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸಾಧಿಸಿರುವ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಐತಿಹಾಸಿಕ, ನಿರ್ಣಾಯಕ ಫಲಿತಾಂಶ ಎಂದು ಟ್ರಂಪ್ ಅಭಿಪ್ರಾಯಪಟ್ಟಿದ್ದು, ಮೋದಿ ನಾಯಕತ್ವವನ್ನು ಭಾರತಕ್ಕೆ ಅದೃಷ್ಟವೆಂದು ಹೇಳಿದ್ದಾರೆ.ಬಿಜೆಪಿ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿದ್ದು, ಮಮತಾ ಬ್ಯಾನರ್ಜಿಯವರ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 15 ವರ್ಷಗಳ ಆಡಳಿತಕ್ಕೆ ತೆರೆ ಎಳೆದಿದೆ.

ಶ್ವೇತಭವನದ ವಕ್ತಾರ ಕುಶ್ ದೇಸಾಯಿ ಪ್ರಕಟಿಸಿದ ಹೇಳಿಕೆಯಲ್ಲಿ “ಇತ್ತೀಚೆಗೆ ನಡೆದ ದೂರವಾಣಿ ಸಂಭಾಷಣೆಯಲ್ಲಿ ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿ ಅವರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಮೋದಿ ಅವರನ್ನು ನಾಯಕನಾಗಿ ಹೊಂದಿರುವುದು ಭಾರತಕ್ಕೆ ಅದೃಷ್ಟವೆಂದು ಹೇಳಿದರು. ಇತ್ತೀಚಿನ ಐತಿಹಾಸಿಕ ಹಾಗೂ ನಿರ್ಣಾಯಕ ಚುನಾವಣಾ ಜಯಕ್ಕಾಗಿ ಅವರನ್ನು ಅಭಿನಂದಿಸಿದರು,” ಎಂದು ತಿಳಿಸಿದ್ದಾರೆ.ಪಶ್ಚಿಮ ಬಂಗಾಳದ ಈ ಫಲಿತಾಂಶವು ದೀರ್ಘಕಾಲದ ಟಿಎಂಸಿ ಹಿಡಿತಕ್ಕೆ ತೆರೆ ಎಳೆದಿದೆ. ಇದು ಪ್ರಧಾನಿ ಮೋದಿಗೆ ಮೂರನೇ ಅವಧಿಯ ಮಧ್ಯದಲ್ಲಿ ರಾಜಕೀಯ ಬಲ ನೀಡಿದಂತಾಗಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!