ರಾಮನ ಭಕ್ತರು ರಾವಣನ ರೀತಿ ವರ್ತಿಸಬಾರದು: ಕೇಂದ್ರ ಸಚಿವ ಸುಕಾಂತ ಮಜುಂದಾರ್,

Picture of Savistara

Savistara

Bureau Report

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವರದಿಯಾಗುತ್ತಿರುವಚುನಾವಣೋತ್ತರ ಹಿಂಸಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್, ಟಿಎಂಸಿ ರೀತಿ ವರ್ತಿಸಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾರ್ಯಕರ್ತರ ನಡೆಯನ್ನು ಬಹಿರಂಗವಾಗಿ ಖಂಡಿಸಿದ್ದಾರೆ.’ಬಿಜೆಪಿಯು ಬಿಜೆಪಿಯಾಗಿಯೇ ಉಳಿಯಬೇಕು, ಅದು ಟಿಎಂಸಿ ಆಗಬಾರದು. ಜನರು ಟಿಎಂಸಿಯನ್ನು ತಿರಸ್ಕರಿಸಿದ್ದಾರೆ. ಆದ್ದರಿಂದ, ಟಿಎಂಸಿಯಂತೆ ವರ್ತಿಸಬೇಡಿ. ನಿಮ್ಮೆಲ್ಲರ(ಬಿಜೆಪಿ ಕಾರ್ಯಕರ್ತರು) ಮೇಲೆ ಸತತ ದೌರ್ಜನ್ಯಗಳು ನಡೆದಿವೆ ಎಂಬುದು ನಮಗೆ ತಿಳಿದಿದೆ. ಆದರೆ ನೀವು ತಾಳ್ಮೆಯಿಂದಿರಬೇಕು. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ’ ಎಂದಿದ್ದಾರೆ.’ನಾವು ರಾಮನ ಭಕ್ತರು. ರಾವಣನಂತೆ ವರ್ತಿಸಬಾರದು’ ಎಂದೂ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು 207 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಸತತ 15 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಟಿಎಂಸಿಯು 80 ಸ್ಥಾನಗಳನ್ನು ಪಡೆದುಕೊಂಡಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!