West Bengal | ಮಮತಾ ಬ್ಯಾನರ್ಜಿ ಇನ್ನು CM ಅಲ್ಲ; ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ

Picture of Savistara

Savistara

Bureau Report

ಕೋಲ್ಕತಾ, ಮೇ 7: ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆ‌ರ್.ಎನ್. ರವಿ ಗುರುವಾರ ವಿಸರ್ಜಿಸಿದ್ದು, ಇದರೊಂದಿಗೆ ತೃಣಮೂಲ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಂತ್ಯಗೊಂಡಿದೆ. ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನ ತೊರೆಯಲು ನಿರಾಕರಿಸಿದ್ದರಿಂದ ಈ ಬೆಳವಣಿಗೆ ನಡೆದಿದೆ.ಭಾರತ ಸಂವಿಧಾನದ 174 (2)(ಬಿ) ವಿಧಿಯ ಅಡಿಯಲ್ಲಿ ನೀಡಲಾದ ಸಾಂವಿಧಾನಿಕ ಅಧಿಕಾರವನ್ನು ಬಳಸಿಕೊಂಡು ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ.

‘2026ರ ಮೇ 7ರಿಂದ ಜಾರಿಗೆ ಬರುವಂತೆ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ವಿಸರ್ಜಿಸುತ್ತೇನೆ’ ಎಂದು ಆ‌ರ್.ಎನ್. ರವಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

71 ವರ್ಷದ ಮಮತಾ ಬ್ಯಾನರ್ಜಿ ಅವರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಮತಗಳ ಲೂಟಿ ಮತ್ತು ಇವಿಎಂ ತಿರುಚುವಿಕೆಯ ಪರಿಣಾಮ ಎಂದು ಆರೋಪಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರಾಕರಿಸಿದ್ದರು.ತಮ್ಮ ಪಕ್ಷವನ್ನು ಅಧಿಕಾರದಿಂದ ದೂರ ಮಾಡಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಸಂಚು ರೂಪಿಸಿದೆ ಎಂದು ತೃಣಮೂಲ ಕಾಂಗ್ರೆಸ್‌ ಆರೋಪಿಸಿತ್ತು. ಬಿಜೆಪಿ ಅನೈತಿಕವಾಗಿ ಅಧಿಕಾರಕ್ಕೆ ಬಂದಿದೆ ಎಂದು ಮಮತಾ ಟೀಕಿಸಿದ್ದರು.ಪಶ್ಚಿಮ ಬಂಗಾಳ ಸರ್ಕಾರದ ಅವಧಿ ಬುಧವಾರ ಅಂತ್ಯಗೊಂಡಿತ್ತು. ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವವರೆಗೆ ರಾಜ್ಯಪಾಲರು ಮಧ್ಯಂತರ ಆಡಳಿತದ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ ಎಂದು ಕೇಂದ್ರ ಸರ್ಕಾರದ ಮಾಜಿ ಕಾರ್ಯದರ್ಶಿ ಜವಾಹರ್ ಸರ್ಕಾರ್ ಹೇಳಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!