Madikeri | ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತ್ಯು

Picture of Savistara

Savistara

Bureau Report

ನಿಯಂತ್ರಣ ತಪ್ಪಿ ರಸ್ತೆ ಬದಿ ದರೆಗೆ ಢಿಕ್ಕಿಯಾಗಿ ನಿಂತ ಬಸ್‌: ಪ್ರಯಾಣಿಕರು ಪಾರು

ಮಡಿಕೇರಿ, ಮೇ 8: ಬಸ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಕ್ಕೀಡಾಗಿ ಚಾಲಕ ಮೃತಪಟ್ಟ ದಾರುಣ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಬೆಂಗಳೂರು ಮೂಲದ ಶಿವಕುಮಾರ್ (50) ಮೃತಪಟ್ಟ ಬಸ್ ಚಾಲಕ. ಶಿವಕುಮಾರ್ ಚಲಾಯಿಸುತ್ತಿದ್ದ ಈ ಬಸ್‌ ಇಂದು ಮುಂಜಾನೆ 4:45ರ ಸುಮಾರಿಗೆ ಮಡಿಕೇರಿಯಿಂದ ಸುಳ್ಯ ಕಡೆಗೆ ಪ್ರಯಾಣ ಬೆಳೆಸಿತ್ತು. ಬಸ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ತಾಳತ್ತಮನೆ ಬಳಿ ತಲುಪಿದಾಗ ಚಾಲಕ ಶಿವಕುಮಾರ್ ರಿಗೆ ಹೃದಯಾಘಾತವಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬಲಬದಿಯ ದರೆಗೆ ಢಿಕ್ಕಿಯಾಗಿ ವಾಲಿ ನಿಂತಿದೆ. ಬಸ್ಸಿನಲ್ಲಿದ್ದ ಸುಮಾರು 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಶಿವಕುಮಾರ್ ಹೃದಯಾಘಾತವಾದ ಸ್ವಲ್ಪ ಹೊತ್ತಿನಲ್ಲೇ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.ಈ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!