ಚಿತ್ರದುರ್ಗ : ಇಂದು ಅದ್ದೂರಿ ಬಿಎಸ್‌ವೈ ಅಭಿಮಾನೋತ್ಸವ! ಕಾರ್ಯಕ್ರಮದಲ್ಲಿ ಭಾಗಿಯಾದ 10 ಲಕ್ಷಕ್ಕೂ ಅಧಿಕ ಅಭಿಮಾನಿಗಳು

Picture of Savistara

Savistara

Bureau Report

​ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ಇಂದು ನೆರೆದಿದ್ದ 10 ಲಕ್ಷಕ್ಕೂ ಅಧಿಕ ಅಭಿಮಾನಿಗಳ ಸಾಗರ, ಬಿ. ಎಸ್. ಯಡಿಯೂರಪ್ಪ ಅವರ ಮೇಲಿರುವ ಅಚಲವಾದ ಪ್ರೀತಿ ಮತ್ತು ಗೌರವಕ್ಕೆ ಸಾಕ್ಷಿಯಾಯಿತು.​

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಜೀ ಅವರ ಉಪಸ್ಥಿತಿಯಲ್ಲಿ, ನಾಡಿನ ಮೂಲೆ ಮೂಲೆಯಿಂದ ಬಂದ ರೈತ ಬಂಧುಗಳು ಮತ್ತು ಅಭಿಮಾನಿಗಳ ಸಾಕ್ಷಿಯಾಗಿ “ಬಿಎಸ್‌ವೈ ಅಭಿಮಾನೋತ್ಸವ” ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು.

ಬಿಎಸ್ವೈ ಅವರ 50 ವರ್ಷಗಳ ಸಾರ್ಥಕ ಸೇವೆಗೆ ಸಂದ ಅತಿದೊಡ್ಡ ಗೌರವ ಇದಾಗಿದೆ.ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ. ಎಲ್.‌ ಸಂತೋಷ್‌̧ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್.‌ ಬೊಮ್ಮಾಯಿ, ಡಿ. ವಿ. ಸದಾನಂದ ಗೌಡ, ಜಗದೀಶ್‌ ಶೆಟ್ಟರ್‌, ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ವಿ. ಸೋಮಣ್ಣ, ಕು. ಶೋಭಾ ಕರಂದ್ಲಾಜೆ, ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌, ಸಂಸದ ಬಿ ವೈ ರಾಘವೇಂದ್ರ,

ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿವಿಧ ಮಠಾಧೀಶರುಗಳು, ಸಂಸದರು, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು. ​ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!