‘ಸರ್ಕಾ‌ರ್’ನಿಂದ ತಮಿಳುನಾಡು ಸರಕಾರದವರೆಗೆ; ಸಿಎಂ ಆಗಿ ವಿಜಯ್ ನಾಳೆ (ಮೇ 10) ಪ್ರಮಾಣ

Picture of Savistara

Savistara

Bureau Report

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ರವಿವಾರ ಮಧ್ಯಾಹ್ನ 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಚೆನ್ನೈನ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು ವಿಜಯ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸರ್ಕಾರ ರಚನೆಗೆ ಅಗತ್ಯ ಬೆಂಬಲ ದೊರೆತ ಹಿನ್ನೆಲೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆ ಪ್ರಕ್ರಿಯೆ ಅಂತಿಮಗೊಂಡಿದೆ.ವಿಜಯ್ ಅವರೊಂದಿಗೆ ಹೊಸ ಸಚಿವ ಸಂಪುಟದ ಕೆಲ ಸದಸ್ಯರೂ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಸಮಾರಂಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಹಾಗೂ ಟಿವಿಕೆ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.ಚೊಚ್ಚಲ ರಾಜಕೀಯ ಪ್ರವೇಶದಲ್ಲಿಯೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸುತ್ತಿರುವ ವಿಜಯ್ ಅವರ ಪ್ರಮಾಣ ವಚನ ಸಮಾರಂಭದ ಹಿನ್ನೆಲೆಯಲ್ಲಿ ಚೆನ್ನೈ ನಗರದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

[t4b-ticker]
error: Content is protected !!