ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ: ಶುಭಕೋರಿದ ಶೇಖ್ ಹಸೀನಾ

Picture of Savistara

Savistara

Bureau Report

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿಹೊಸ ಅಧ್ಯಾಯ ಆರಂಭವಾಗಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಹಿರಿಯ ನಾಯಕ ಸುವೇಂದು ಅಧಿಕಾರಿ ಅವರು ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಬಂಗಾಳದಲ್ಲಿ ಬಿಜೆಪಿಯ ಈ ಐತಿಹಾಸಿಕ ಜಯ ಹಾಗೂ ಸುವೇಂದು ಅಧಿಕಾರಿ ಅವರ ನಾಯಕತ್ವದ ಕುರಿತು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಮೆಚ್ಚುಗೆ ವ್ಯಕ್ತಪಡಿಸಿದ್ದು “ಪಶ್ಚಿಮ ಬಂಗಾಳದ ಜನರ ಈ ತೀರ್ಪು ಸುಭೇಂದು ಅಧಿಕಾರಿ ಅವರ ಜನಪರ ನಾಯಕತ್ವಕ್ಕೆ ಸಂದ ಜಯವಾಗಿದೆ,” ಎಂದು ಬಣ್ಣಿಸಿದ್ದಾರೆ. ಪ್ರಸ್ತುತ ಭಾರತದಲ್ಲಿ ಆಶ್ರಯ ಪಡೆದಿರುವ ಹಸೀನಾ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ..

ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಬಾಂಗ್ಲಾ ಅಕ್ರಮ ನುಸುಳುವಿಕೆ ಮತ್ತು ಮಾಫಿಯಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ಭರವಸೆ ನೀಡಿತ್ತು. ಇಂತಹ ಸಂದರ್ಭದಲ್ಲಿ ಶೇಖ್ ಹಸೀನಾ ಅವರಿಂದ ಪ್ರಶಂಸೆ ಬಂದಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಆಗಸ್ಟ್ 2024 ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಭೀಕರ ಹಿಂಸಾಚಾರದ ನಂತರ, ಶೇಖ್ ಹಸೀನಾ ಅವರು ದೇಶ ತೊರೆದು ಭಾರತಕ್ಕೆ ಬಂದು ಇಲ್ಲಿಯೇ ಆಶ್ರಯ ಪಡೆಯುತ್ತಿದ್ದಾರೆ. ಹಸೀನಾ ಅವರ ನಿರ್ಗಮನದ ನಂತರ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್‌ ಅವರು ಹಸೀನಾ ಮೇಲೆ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಹೂಡಿದ್ದಾರೆ ಮತ್ತು ಅವರ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ನಡೆದ ಚುನಾವಣೆಯಲ್ಲಿ ಹಸೀನಾ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಸದ್ಯ ಬಾಂಗ್ಲಾದೇಶದಲ್ಲಿ ತಾರಿಕ್ ರೆಹಮಾನ್ ನೇತೃತ್ವದ ಬಿಎನ್‌ಪಿ (BNP) ಪಕ್ಷವು ಅಧಿಕಾರದಲ್ಲಿದೆ.

[t4b-ticker]
error: Content is protected !!