ಮೇ-ಜೂನ್ ತಿಂಗಳ ಕೇಂದ್ರದ ಪಡಿತರ ಮೇ.ತಿಂಗಳಲ್ಲಿ ವಿತರಣೆ | ಅನ್ನಭಾಗ್ಯ ಪಡಿತರ ಜೂನ್‌ ತಿಂಗಳಲ್ಲಿ ವಿತರಣೆ

Picture of Savistara

Savistara

Bureau Report

2026 ಮೇ ಮತ್ತು ಜೂನ್ ತಿಂಗಳ ಕೇಂದ್ರದ ಅಕ್ಕಿಯನ್ನು ಮೇ ತಿಂಗಳಿನಲ್ಲಿಯೇ ವಿತರಿಸಲಾಗುತ್ತದೆ ಹಾಗೂ ಅನ್ಮಭಾಗ್ಯ ಪಡಿತರವನ್ನು ಜೂನ್ ತಿಂಗಳಲ್ಲಿ ವಿತರಿಸಲಾಗುತ್ತದೆ ಎಂದು ಸುಳ್ಯ ತಹಶೀಲ್ದಾರ್ ತಿಳಿಸಿದ್ದಾರೆ.

2026 ನೇ ಮೇ ಹಾಗೂ ಜೂನ್ ತಿಂಗಳಿಗೆ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳಿಗೆ NFSA ಅಡಿಯಲ್ಲಿ ಕೇಂದ್ರದ (Central) ಅಕ್ಕಿಯನ್ನು ಹಂಚಿಕೆ ಮಾಡಲಾಗಿರುತ್ತದೆ. ಆದ್ದರಿಂದ ಎಲ್ಲಾ ಬಿ ಪಿ ಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿಯ ಫಲಾನುಭವಿಗಳು ಅವರಿಗೆ ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿಗಳಲ್ಲಿ ಎರಡು ಬಾರಿ ಬಯೋಮೆಟ್ರಿಕ್ ನೀಡಿ ಮೇ ಮತ್ತು ಜೂನ್ ತಿಂಗಳ ಅಕ್ಕಿಯನ್ನು ಮೇ ತಿಂಗಳಲ್ಲಿಯೇ ಪಡೆದು ಕೊಳ್ಳಬೇಕಾಗಿರುತ್ತದೆ. ಮೇ ಮತ್ತು ಜೂನ್ ತಿಂಗಳ ಅನ್ನಭಾಗ್ಯ ಅಕ್ಕಿಯನ್ನು ಜೂನ್ ತಿಂಗಳಲ್ಲಿ ವಿತರಿಸಲಾಗುತ್ತದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ : ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೆಸರು ಸೇರ್ಪಡೆ ಬೇರ್ಪಡೆ ಅವಕಾಶ ಕಲ್ಪಿಸಲಾಗಿದೆ. ವೈದ್ಯಕೀಯ ನೆಲೆಯಲ್ಲಿ ಅತೀ ಅಗತ್ಯವಾಗಿ ಹೊಸ ಬಿಪಿಎಲ್ ಕಾರ್ಡ್ ಆಗಬೇಕಾದಲ್ಲಿ ಮಾತ್ರ ಹೊಸ ಅರ್ಜಿ ಪ್ರಾರಂಭಗೊಂಡಿರುತ್ತದೆ. ಹೆಚ್ಚಿನ ಮಾಹಿತಿಗೆ ಸುಳ್ಯ ಆಹಾರ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!