ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮೇ.12 ರಂದು ಸುಬ್ರಹ್ಮಣ್ಯದ ಸಂಪುಟ ಶ್ರೀ ನರಸಿಂಹ ಮಠದ ಪೀಠಾಧಿಪತಿ ವಿದ್ಯಾಪ್ರಸನ್ನ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಪತ್ನಿ ಮತ್ತು ಮಕ್ಕಳೊಂದಿಗೆ ಆಗಮಿಸಿದ ದಂಪತಿಗಳನ್ನು ಶ್ರೀಗಳು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭ ಬಿಜೆಪಿಯ ಕೆಲ ಮುಖಂಡರು ಉಪಸ್ಥಿತರಿದ್ದರು.













































