ತೈಲ ಬಿಕ್ಕಟ್ಟಿನ ಮಧ್ಯೆ ಐದು ದೇಶಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ಮೋದಿ

Picture of Savistara

Savistara

Bureau Report

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಉಂಟಾಗಿರುವ ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಐದು ರಾಷ್ಟ್ರಗಳ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.

ಮೇ 15ರಿಂದ 20ರವರೆಗೆ ಯುಎಇ, ನೆದರ್ಲೆಂಡ್ಸ್, ಸ್ವೀಡನ್‌, ನಾರ್ವೆ ಮತ್ತು ಇಟಲಿ ದೇಶಗಳಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷದಿಂದಾಗಿ ಜಾಗತಿಕ ತೈಲ ಪೂರೈಕೆ ಸರಪಳಿಗೆ ಅಡಚಣೆಯಾಗಿದೆ. ಜಾಗತಿಕ ಅಸ್ಥಿರತೆಯ ಮಧ್ಯೆ ದೇಶದ ಆರ್ಥಿಕ ಹಿತಾಸಕ್ತಿಗಳನ್ನು ಕಾಪಾಡಿಕೊಳ್ಳಲು ಪ್ರಧಾನಿ ಮೋದಿ ಅವರ ಈ ಪ್ರವಾಸವು ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ.ದೇಶದಲ್ಲಿ ಇಂಧನ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಮೋದಿ ಈಗಾಗಲೇ ನಾಗರಿಕರಿಗೆ ಮನವಿ ಮಾಡಿದ್ದಾರೆ. ಇದರಲ್ಲಿ ಸಾರ್ವಜನಿಕ ಸಾರಿಗೆ ಬಳಕೆ, ಮನೆಯಿಂದಲೇ ಕೆಲಸ ಮುಂತಾದ ಹಲವು ಸಲಹೆಗಳನ್ನು ನೀಡಿದ್ದಾರೆ.

ಈ ಎಲ್ಲದರ ನಡುವೆ ಮೋದಿ ಅವರ ಸಂಯುಕ್ತ ಅರಬ್ ಒಕ್ಕೂಟದ (ಯುಎಇ) ಭೇಟಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಒಪೆಕ್‌ನಿಂದ ಯುಎಇ ನಿರ್ಗಮಿಸಿತ್ತು. ಆದ್ದರಿಂದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗಿನ ಭೇಟಿ ಸಂದರ್ಭದಲ್ಲಿ ನೇರವಾಗಿ ಇಂಧನ ಖರೀದಿ ಸಂಬಂಧ ಮಾತುಕತೆ ನಡೆಯುವ ಸಾಧ್ಯತೆಯಿದೆ.ಇಂಧನ ಸಹಕಾರ, ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಹಾಗೂ ಅಂತರರಾಷ್ಟ್ರೀಯ ವಿಷಯಗಳ ಕುರಿತು ಉಭಯ ನಾಯಕರು ಚರ್ಚಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಯುಎಇ, ಭಾರತದ ಮೂರನೇ ಅತಿದೊಡ್ಡ ವ್ಯಾಪಾರಿ ಪಾಲುದಾರ ರಾಷ್ಟ್ರವಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!