ಬೆಳ್ಳಂಬೆಳಗ್ಗೆ ಸ್ಯಾಂಡಲ್‌ವುಡ್ ಶೋಕಸಾಗರದಲ್ಲಿ ಮುಳುಗಿದೆ. ಕನ್ನಡ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಫಿಟ್ ಅಂಡ್ ಫೈನ್ ಆಗಿದ್ದ 47 ವರ್ಷದ ನಟನಿಗೆ ಇದ್ದಕ್ಕಿದ್ದ ಹಾಗೇ ಹೃದಯಾಘಾತವಾಗಿದ್ದು ಕೊನೆಯುಸಿರೆಳೆದಿದ್ದಾರೆ.ಕನ್ನಡದ ಹಲವು ಸಿನಿಮಾಗಳಲ್ಲಿ ನಾಯಕನಾಗಿ, ಖಳನಾಯಕನಾಗಿ, ಪೋಷಕ ಪಾತ್ರಗಳಲ್ಲಿ ನಟಿಸಿದ್ದರು. ಇಷ್ಟೇ ಅಲ್ಲದೇ ಕಿರುತೆರೆಯಲ್ಲಿಯೂ ದಿಲೀಪ್ ರಾಜ್ ನಟಿಸಿದ್ದರು. ‘ಹಿಟ್ಲರ್ ಕಲ್ಯಾಣ’ ದಿಲೀಪ್ ರಾಜ್ ನಟಿಸಿದ್ದ ಜನಪ್ರಿಯ ಧಾರಾವಾಹಿ. ಇಷ್ಟೇ ಅಲ್ಲದೇ ದಿಲೀಪ್ ರಾಜ್ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. ಅಲ್ಲದೇ, ಎರಡು ಧಾರಾವಾಹಿಗಳ ನಿರ್ಮಾಣ ಆಗುತ್ತಿತ್ತು.ಇಂದು (ಮೇ 13) ಬೆಳಗಿನ ಜಾವ ದಿಲೀಪ್ ರಾಜ್ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಮನೆಯಲ್ಲಿಯೇ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದಿಲೀಪ್ ರಾಜ್ ಅವರಿಗೆ ಚಿಕಿತ್ಸೆ ನೀಡಿದರೂ ಅವರು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ. ಸದ್ಯ ಕುಮಾರ ಸ್ವಾಮಿ ಲೇಔಟ್ ನ ಅಪೋಲೊ ಆಸ್ಪತ್ರೆಯಲ್ಲಿ ಮೃತದೇಹವನ್ನು ಇರಿಸಲಾಗಿದೆ.ದಿಲೀಪ್ ರಾಜ್ ಅವರು ಕನ್ನಡ ಸಿನಿಮಾರಂಗದಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದರು. ದಿಲೀಪ್ ರಾಜ್ ಅವರು ಕನ್ನಡ ಧಾರಾವಾಹಿಗಳ ಮೂಲಕ ಬಹಳ ಜನಪ್ರಿಯತೆ ಪಡೆದಿದ್ದರು. ಜನಪ್ರಿಯ ಧಾರಾವಾಹಿ ‘ಹಿಟ್ಲರ್ ಕಲ್ಯಾಣ’ ಸೇರಿದಂತೆ ಹಲವಾರು ಸೀರಿಯಲ್‌ಗಳಲ್ಲಿ ಅವರು ಅಭಿನಯಿಸಿ ಮನೆಮಾತಾಗಿದ್ದರು. ಕಿರುತೆರೆಯ ಜೊತೆಗೆ ಅವರು ಸಿನಿಮಾರಂಗದಲ್ಲಿಯೂ ಗುರುತಿಸಿಕೊಂಡಿದ್ದರು.‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ಹಾಗೂ ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ನಟಿಸಿದ್ದರು. ಪುನೀತ್ ರಾಜ್‌ಕುಮಾರ್ ಅಭಿನಯದ ‘ಮಿಲನ’ ಚಿತ್ರದಲ್ಲಿ ಅವರು ಖಳನಟನ ಪಾತ್ರದಲ್ಲಿ ಮಿಂಚಿದರು. ಇತ್ತೀಚೆಗೆ ಅವರು ಡಾರ್ಲಿಂಗ್ ಕೃಷ್ಣ ನಟಿಸಿ ನಿರ್ದೇಶಿಸಿದ್ದ ‘ಲವ್ ಮಾಕ್ಟೇಲ್ 3’ ಚಿತ್ರದಲ್ಲಿಯೂ ಕಾಣಿಸಿಕೊಂಡಿದ್ದರು. ಇದು ಅವರ ಕೊನೆಯ ಸಿನಿಮಾವಾಗಿದೆ.
ಖ್ಯಾತ ಕಿರುತೆರೆ ನಟ ದಿಲೀಪ್ ರಾಜ್ ಇನ್ನಿಲ್ಲ
Savistara
Bureau Report
[t4b-ticker]













































