ಬೆಂಗಳೂರು: 2022 ರಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಹೊರಡಿಸಿದ್ದ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧರಿಸುವ ಕುರಿತ ಆದೇಶವನ್ನು ಬುಧವಾರ ಸಿದ್ದರಾಮಯ್ಯ ಸರಕಾರ ಹಿಂಪಡೆದಿದೆ.ಬಿಜೆಪಿ ಸರಕಾರ ಹೊರಡಿಸಿದ್ದ ಆದೇಶದ ಮೂಲಕ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಲಾಗಿತ್ತು. ಇದೀಗ ಈ ಅದೇಶವನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ.ಸಮವಸ್ತ್ರ ಮತ್ತು ಶಿಸ್ತನ್ನು ಕಾಪಾಡುವ ಜೊತೆಗೆ, ತಾರತಮ್ಯವಿಲ್ಲದ ಮತ್ತು ಸಾಂವಿಧಾನಿಕವಾಗಿ ಸಮತೋಲಿತವಾದ ರೀತಿಯಲ್ಲಿ ಸೀಮಿತ ಸಾಂಪ್ರದಾಯಿಕ ಹಾಗೂ ಪದ್ಧತಿ ಆಧಾರಿತವಾದ ಸಂಕೇತಗಳನ್ನು ಧರಿಸಲು ಅನುಮತಿಸುವ ಉದ್ದೇಶದಿಂದ 2022 ರ ಆದೇಶವನ್ನು ಹಿಂಪಡೆದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಹೊಸ ನಿರ್ದೇಶನಗಳನ್ನು ನೀಡುವುದು ಅಗತ್ಯವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಿಜಾಬ್ ನಿರ್ಬಂಧಿಸುವ ಬಿಜೆಪಿ ಸರಕಾರದ ಸಮವಸ್ತ್ರ ಆದೇಶ ಹಿಂಪಡೆದ ಸಿದ್ದರಾಮಯ್ಯ ಸರಕಾರ
Savistara
Bureau Report
[t4b-ticker]













































