ಪುತ್ತೂರು: ಕಾರು ಬಿಟ್ಟು ಸರ್ಕಾರಿ ಬಸ್‌ ಏರಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Picture of Savistara

Savistara

Bureau Report

ಪುತ್ತೂರು ಮೇ 14: ಇಂಧನ ಉಳಿತಾಯ ಹಾಗೂ ಸಾರ್ವಜನಿಕ ಸಾರಿಗೆ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಕರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಅವರು ಸ್ಪಂದಿಸಿದ್ದು. ಪುತ್ತೂರಿನಲ್ಲಿ ನಡೆದ ವಿವಾಹ ಸಮಾರಂಭವೊಂದಕ್ಕೆ ಅವರು ಮಂಗಳೂರಿನಿಂದ ಸರ್ಕಾರಿ ಬಸ್‌ ಮತ್ತು ಆಟೋ ಮೂಲಕ ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಪಕ್ಷದ ಪುತ್ತೂರು ನಗರ ಮಂಡಲದ ಕಾರ್ಯದರ್ಶಿಯವರ ವಿವಾಹ ಅರತಕ್ಷತೆ ಕಾರ್ಯಕ್ರಮಕ್ಕೆ ತೆರಳಲು ಸತೀಶ್ ಕುಂಪಲ ಅವರು ತಮ್ಮ ವೈಯಕ್ತಿಕ ಕಾರನ್ನು ಬಳಸದೆ, ಮಂಗಳೂರಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಪ್ರಯಾಣಿಸಿದರು.ಪುತ್ತೂರು ನಿಲ್ದಾಣಕ್ಕೆ ತಲುಪಿದ ಬಳಿಕ ಅಲ್ಲಿಂದ ಆಟೋ ರಿಕ್ಷಾ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ತಲುಪಿದರು.

“ದೇಶದ ಹಿತದೃಷ್ಟಿಯಿಂದ ಇಂಧನ ಬಳಕೆಯನ್ನು ಕಡಿಮೆ ಮಾಡಿ, ಸಾರ್ವಜನಿಕ ಸಾರಿಗೆಯನ್ನು ಬಳಸಬೇಕೆಂಬ ಪ್ರಧಾನಿಯವರ ಆಶಯದಂತೆ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕು,” ಎಂದು ಈ ಸಂದರ್ಭದಲ್ಲಿ ಅವರು ಮನವಿ ಮಾಡಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!