ಕರ್ನಾಟಕ ಸಹಿತ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ 3ನೇ ಹಂತದ SIR: ಚುನಾವಣಾ ಆಯೋಗ ಘೋಷಣೆ

Picture of Savistara

Savistara

Bureau Report

ಹೊಸದಿಲ್ಲಿ: ಕರ್ನಾಟಕ, ಮಹಾರಾಷ್ಟ್ರ, ದಿಲ್ಲಿ ಸೇರಿದಂತೆ 16 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ.ಭಾರತೀಯ ಚುನಾವಣಾ ಆಯೋಗ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಸುವಂತೆ ನಿರ್ದೇಶಿಸಿದೆ. ಮೂರನೇ ಹಂತದ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡರೆ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೊರತುಪಡಿಸಿ ಇಡೀ ದೇಶದಲ್ಲಿ ಎಸ್ ಐಆರ್ ಪ್ರಕ್ರಿಯೆ ನಡೆಸಿದಂತಾಗುತ್ತದೆ.

13 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊದಲ ಎರಡು ಹಂತಗಳಲ್ಲಿ SIR ಪ್ರಕ್ರಿಯೆ ನಡೆದಿದೆ. ಈ ಪ್ರಕ್ರಿಯೆ ಸುಮಾರು 59 ಕೋಟಿ ಮತದಾರರನ್ನು ಒಳಗೊಂಡಿದ್ದು, 6.3 ಲಕ್ಷಕ್ಕೂ ಹೆಚ್ಚು BLO ಗಳು ಮತ್ತು ರಾಜಕೀಯ ಪಕ್ಷಗಳಿಂದ ನೇಮಕಗೊಂಡಿದ್ದ 9.2 ಲಕ್ಷ BLA ಗಳು SIR ಪ್ರಕ್ರಿಯೆಯ ವಿವಿಧ ಹಂತಗಳಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.ಮೂರನೇ ಹಂತದ ಎಸ್‌ಐಆರ್ ಪ್ರಕ್ರಿಯೆ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಚಂಡೀಗಢ, ಹರ್ಯಾಣ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ದಿಲ್ಲಿಯ NCT, ಒಡಿಶಾ, ಪಂಜಾಬ್‌, ಸಿಕ್ಕಿಂ, ತ್ರಿಪುರಾ, ತೆಲಂಗಾಣ, ಉತ್ತರಾಖಂಡದಲ್ಲಿ ನಡೆಯಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!