ವಾಹನ ಸವಾರರಿಗೆ ಶಾಕಿಂಗ್​ ನ್ಯೂಸ್​: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ 3 ರೂ. ಏರಿಕೆ

Picture of Savistara

Savistara

Bureau Report

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ತಲಾ 3 ರೂಪಾಯಿ ಹೆಚ್ಚಳವಾಗಿದೆ ಎಂದು ವರದಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ 3 ರೂಪಾಯಿ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ದರ 100 ರೂಪಾಯಿಗಳ ಗಡಿಯಲ್ಲಿದ್ದರೆ, ಡೀಸೆಲ್ ಬೆಲೆಯೂ ಗಣನೀಯವಾಗಿ ಏರಿಕೆಯಾಗಿದೆ.

ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿರುವುದು ಈ ಬದಲಾವಣೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಕಳೆದ ಕೆಲವು ಸಮಯದಿಂದ ಸ್ಥಿರವಾಗಿದ್ದ ಇಂಧನ ದರವು ಏಕಾಏಕಿ ಏರಿಕೆಯಾಗಿರುವುದು ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದಂತಾಗಿದೆ. ಸಾರಿಗೆ ವೆಚ್ಚ ಹೆಚ್ಚಾಗುವುದರಿಂದ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗುವ ಆತಂಕ ಎದುರಾಗಿದೆ. ತೈಲ ಕಂಪನಿಗಳು ಅನುಭವಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಈ ಕ್ರಮ ಅನಿವಾರ್ಯ ಎಂದು ಮೂಲಗಳು ತಿಳಿಸಿವೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!