ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ

Picture of Savistara

Savistara

Bureau Report

ಕರ್ನಾಟಕದ ವಿವಿಧ ಭಾಗಗಳಲ್ಲಿ ಮೇ 17.05.2026ರ ಬೆಳಿಗ್ಗೆ 8 ಗಂಟೆಯವರೆಗೆ ಗುಡುಗು ಸಹಿತ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮಳೆಯ ಚಟುವಟಿಕೆ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿವೆ.

ಕರಾವಳಿ ಭಾಗ : ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ವಿಶೇಷವಾಗಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ. ಮೇ 19ರವರೆಗೆ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಮಲೆನಾಡು ಭಾಗ : ಕೊಡಗು, ಹಾಸನ, ಚಿಕ್ಕಮಗಳೂರುಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಮೇ 19ರವರೆಗೆ ಮಳೆ ಮುಂದುವರಿಯುವ ಸೂಚನೆಗಳಿವೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ,ಗದಗ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದ‌ರ್, ಕೊಪ್ಪಳ, ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಸಂಜೆ ವೇಳೆ ಸಾಮಾನ್ಯ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೆಲವೆಡೆ ಮಾತ್ರ ಮಳೆಯ ಪ್ರಮಾಣ ಹೆಚ್ಚಿರಬಹುದು. ಮೇ 17ರ ನಂತರ ಉತ್ತರ ಒಳನಾಡಿನ ಭಾಗಗಳಲ್ಲಿ ಮಳೆಯ ಚಟುವಟಿಕೆ ಕಡಿಮೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡು: ಮೈಸೂರು, ಚಾಮರಾಜನಗರ, ಮಂಡ್ಯ,ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ಸಾಧ್ಯತೆ ಇದೆ. ಮೇ 19ರವರೆಗೆ ಈ ಭಾಗಗಳಲ್ಲಿಯೂ ಮಳೆಯ ಮುಂದುವರಿಯುವ ನಿರೀಕ್ಷೆ ಇದೆ. ವಾತಾವರಣ

ಮುಂಗಾರು ಕುರಿತು ಮಹತ್ವದ ಮಾಹಿತಿ : ಮುಂಗಾರು ಈಗಾಗಲೇ ಅಂಡಮಾನ್ ದ್ವೀಪ ಪ್ರದೇಶವನ್ನು ತಲುಪಿದರೂ, ಮೇ 17ರಿಂದ ಹಿಂದೂ ಮಹಾಸಾಗರದ ಮೂಲಕ ಸಾಗಿಬರುವ ಮುಂಗಾರು ಮಾರುತಗಳು ದುರ್ಬಲಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ. ಇದರಿಂದ ಕರ್ನಾಟಕಕ್ಕೆ ನೈಋತ್ಯ ಮುಂಗಾರು ನಿಗದಿತ ಸಮಯಕ್ಕಿಂತ ತಡವಾಗಿ ಪ್ರವೇಶಿಸುವ ಸಾಧ್ಯತೆಗಳಿವೆ

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!