ವಿದೇಶಿ ಪ್ರಯಾಣದ ಮೇಲೆ ತೆರಿಗೆ ವಿಧಿಸುವ ಪ್ರಶ್ನೆಯೇ ಇಲ್ಲ: ಪ್ರಧಾನಿ ಮೋದಿ ಸ್ಪಷ್ಟನೆ

Picture of Savistara

Savistara

Bureau Report

“ಇದು ಸಂಪೂರ್ಣ ಸುಳ್ಳು. ಇದರಲ್ಲಿ ಸ್ವಲ್ಪವೂ ಸತ್ಯವಿಲ್ಲ”; ಮಾಧ್ಯಮ ವರದಿಯನ್ನು ನಿರಾಕರಿಸಿದ ಪ್ರಧಾನಿ

ಹೊಸದಿಲ್ಲಿ: ವಿದೇಶಿ ಪ್ರಯಾಣದ ಮೇಲೆ ತೆರಿಗೆ, ಸೆಸ್ ಅಥವಾ ಸರ್‌ಚಾರ್ಜ್ ವಿಧಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಮಾಧ್ಯಮ ವರದಿಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಳ್ಳಿಹಾಕಿದರು.’ವಿದೇಶಿ ಪ್ರಯಾಣದ ಮೇಲೆ ಯಾವುದೇ ಹೊಸ ನಿರ್ಬಂಧ ಅಥವಾ ತೆರಿಗೆ ವಿಧಿಸುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದರು.ವಿದೇಶಿ ಪ್ರವಾಸಗಳ ಮೇಲೆ ತೆರಿಗೆ ಅಥವಾ ಹೆಚ್ಚುವರಿ ಶುಲ್ಕ ವಿಧಿಸುವ ಸಾಧ್ಯತೆಯನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ಈ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿತ್ತು. ಈ ವರದಿಗಳ ಬೆನ್ನಲ್ಲೇ ಪ್ರಧಾನಿ ಪ್ರತಿಕ್ರಿಯೆ ನೀಡಿದ್ದಾರೆ.

‘ಇದು ಸಂಪೂರ್ಣ ಸುಳ್ಳು. ಇದರಲ್ಲಿ ಸ್ವಲ್ಪವೂ ಸತ್ಯವಿಲ್ಲ. ವಿದೇಶಿ ಪ್ರಯಾಣದ ಮೇಲೆ ಯಾವುದೇ ರೀತಿಯ ನಿರ್ಬಂಧ ಹೇರುವ ಪ್ರಶ್ನೆಯೇ ಇಲ್ಲ. ‘ಜನರಿಗೆ ವ್ಯವಹಾರ ನಡೆಸಲು ಹಾಗೂ ದೈನಂದಿನ ಜೀವನ ಸುಲಭವಾಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಾವು ಬದ್ಧರಾಗಿದ್ದೇವೆ’ ಎಂದು ಮೋದಿ ಅವರು ಎಕ್ಸ್‌ನಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.ಮಾಧ್ಯಮ ವರದಿಯನ್ನು ಪ್ರಧಾನಿ ಸ್ವತಃ ಸಾರ್ವಜನಿಕವಾಗಿ ನಿರಾಕರಿಸಿರುವುದು ಅಪರೂಪದ ಬೆಳವಣಿಗೆಯಾಗಿದೆ.ಮೂಲಗಳನ್ನು ಉಲ್ಲೇಖಿಸಿ ಪ್ರಕಟವಾಗಿದ್ದ ವರದಿಗಳ ಪ್ರಕಾರ, ವಿದೇಶಿ ಪ್ರಯಾಣದ ಮೇಲೆ ಸೆಸ್, ತೆರಿಗೆ ಅಥವಾ ಸರ್‌ಚಾರ್ಜ್ ವಿಧಿಸುವ ಪ್ರಸ್ತಾವ ಕುರಿತು ಸರ್ಕಾರದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿತ್ತು ಎನ್ನಲಾಗಿತ್ತು.

ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ಇಂಧನ ಉಳಿತಾಯ ಮತ್ತು ವಿದೇಶಿ ವಿನಿಮಯ ಸಂರಕ್ಷಣೆಗೆ ಪ್ರಧಾನಿ ಮೋದಿ ಇತ್ತೀಚಿನ ದಿನಗಳಲ್ಲಿ ಒತ್ತು ನೀಡುತ್ತಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯನ್ನು ಕಡಿಮೆ ಮಾಡುವುದು, ನಗರಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಹೆಚ್ಚು ಬಳಸುವುದು, ಕಾರ್‌ಪೂಲಿಂಗ್‌ಗೆ ಉತ್ತೇಜನ ನೀಡುವುದು, ಎಲೆಕ್ಟಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು, ಪಾರ್ಸೆಲ್ ಸಾಗಣೆಗೆ ರೈಲ್ವೆ ಸೇವೆಗಳನ್ನು ಬಳಸುವುದು ಮತ್ತು ಮನೆಯಿಂದ ಕೆಲಸ ಮಾಡುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವಂತೆ ಅವರು ಸಲಹೆ ನೀಡಿದ್ದರು.

ಇದೇ ವೇಳೆ, ಚಿನ್ನ ಖರೀದಿ ಮತ್ತು ವಿದೇಶ ಪ್ರವಾಸಗಳನ್ನು ಒಂದು ವರ್ಷದವರೆಗೆ ಮುಂದೂಡುವಂತೆಯೂ ಪ್ರಧಾನಿ ದೇಶದ ಜನರಿಗೆ ಮನವಿ ಮಾಡಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!