ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜೇಶ್ವರ ಕ್ಷೇತ್ರ ಹಾಗೂ ಇತ್ತೀಚೆಗೆ ಬ್ರಹ್ಮಕಲಶಗೊಂಡ ದೇವಸ್ಥಾನಕ್ಕೂ ಸಿಡಿಲು ಬಡಿತ: ಮಹಾವಿಷ್ಣು ದೇವರ ಗರ್ಭಗುಡಿಯೇ ಛಿದ್ರ..!

Picture of Savistara

Savistara

Bureau Report

ಬಂಟ್ವಾಳ : ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದ ಕಡಿದಾದ ಬೆಟ್ಟದ ತುದಿಯಲ್ಲಿರುವ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನಕ್ಕೆ ಮೇ 16ರ ಶನಿವಾರ ಸಂಜೆ ಸಿಡಿಲು ಬಡಿದಿದೆ.

ಬೃಹತ್ ಬಂಡೆಯ ತುದಿಯ ಮೇಲಿರುವ ಈ ಐತಿಹಾಸಿಕ ದೇವಸ್ಥಾನಕ್ಕೆ ಸಂಜೆ ಸುಮಾರು 5 ಗಂಟೆಯ ಹೊತ್ತಿಗೆ ಸಿಡಿಲು ಅಪ್ಪಳಿಸಿದೆ ಎಂದು ಅಂದಾಜಿಸಲಾಗಿದೆ.

ಎತ್ತರದ ಗುಡ್ಡದ ಮೇಲಿದ್ದರೂ, ಸಿಡಿಲು ಬಡಿದ ಸಂದರ್ಭದಲ್ಲಿ ಗರ್ಭಗುಡಿ ಹಾಗೂ ಆವರಣದ ಸುತ್ತಮುತ್ತ ಸಾರ್ವಜನಿಕರಾಗಲಿ, ಭಕ್ತರಾಗಲಿ ಯಾರೂ ಇರಲಿಲ್ಲ. ಈ ಕಾರಣದಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಎತ್ತರದ ಗುಡ್ಡದ ಮೇಲಿದ್ದರೂ, ಸಿಡಿಲು ಬಡಿದ ಸಂದರ್ಭದಲ್ಲಿ ಗರ್ಭಗುಡಿ ಹಾಗೂ ಆವರಣದ ಸುತ್ತಮುತ್ತ ಸಾರ್ವಜನಿಕರಾಗಲಿ, ಭಕ್ತರಾಗಲಿ ಯಾರೂ ಇರಲಿಲ್ಲ. ಈ ಕಾರಣದಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಪ್ರಾಕಾರಕ್ಕೆ ಸಿಡಿಲು ಬಡಿದು 1 ಕೋಟಿಯಷ್ಟು ರೂಪಾಯಿ ನಷ್ಟ ಸಂಭವಿಸಿದೆ.

ಸಂಜೆ ಸುಮಾರು 1.30 ರ ವೇಳೆ ಗೆ ಸುರಿದ ಗಾಳಿ ಮಳೆಯ ನಡುವೆ ಸಿಡಿಲು ಬಡಿದಿದೆ.

ಸಿಡಿಲಿನ ಬಡಿತಕ್ಕೆ ದೇವಸ್ಥಾನದ ಗರ್ಭಗುಡಿಯ ಮೇಲಿನ ಪ್ರಾಕಾರ ದ ಶಿಲಾ ಕಲ್ಲುಗಳು ಛಿದ್ರಗೊಂಡು ನೆಲಕ್ಕಪ್ಪಳಿಸಿದೆ.ಕಳೆದ ನಾಲ್ಕು ವರ್ಷಗಳ ಹಿಂದೆಯಷ್ಟೆ ದೇವಸ್ಥಾನ ನವೀಕರಣಗೊಂಡು ಬ್ರಹ್ಮಕಲಶೋತ್ಸವ ನಡೆದಿತ್ತು.ಇದೀಗ ದೇವಸ್ಥಾನದ ದೇವರ ಗರ್ಭಗುಡಿಗೆ ಹಾನಿಯಾಗಿದ್ದು.ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ.ಸಿಡಿಲು ಬಡಿದ ಕಾರಣದಿಂದ ಮತ್ತೆ ದೇವರ ಗುಡಿಯ ನವೀಕರಣ ಕಾರ್ಯ ನಡೆಯಬೇಕಿದ್ದು ಮತ್ತೆ ಕೋಟ್ಯಾಂತರ ರೂಪಾಯಿಗಳು ಖರ್ಚು ಇದೆ ಎಂದು ಹೇಳಲಾಗುತ್ತಿದೆ.ಬಂಟ್ವಾಳ ತಾಲೂಕಿನಲ್ಲಿ ಸಿಡಿಲ ಅಬ್ಬರಕ್ಕೆ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!