ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ( ಮೇ.19) ಮಂಗಳೂರಿನಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯ

Picture of Savistara

Savistara

Bureau Report

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮೇ .19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ನಾಳೆ ಬೆಳಗ್ಗೆ 10 ರಿಂದ ಮಧ್ಯಾಹ್ನ12ಗಂಟೆಯವರೆಗೆ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಸಾರ್ವಜನಿಕರು ಹಾಗೂ ಕ್ಷೇತ್ರದ ಮತದಾರರು ತಮ್ಮ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಂಸದರ ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!