ಸಿಲಿಕಾನ್ ಸಿಟಿ ಮತ್ತು ಕರಾವಳಿ ನಗರಿ ಮಂಗಳೂರು ನಡುವೆ ಪ್ರಯಾಣಿಸುವ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.ಬೆಂಗಳೂರು ಮಂಗಳೂರು ಮಾರ್ಗದಲ್ಲಿ ಬಹುನಿರೀಕ್ಷಿತ ‘ವಂದೇ ಭಾರತ್’ ರೈಲಿನ ಪರೀಕ್ಷಾರ್ಥ ಸಂಚಾರ (Trial Run) ಈಗಾಗಲೇ ಆರಂಭವಾಗಿದ್ದು, ಶೀಘ್ರದಲ್ಲೇ ಈ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಕರಾವಳಿ ಸಂಪರ್ಕಕ್ಕೆ ವೇಗ:ರವಿವಾರ ಬೆಂಗಳೂರು ಮತ್ತು ಮುಂಬೈ ನಡುವಿನ ಎಕ್ಸ್‌ಪ್ರೆಸ್ ರೈಲಿಗೆ ವರ್ಚುವಲ್ ವೇದಿಕೆಯ ಮೂಲಕ ಹಸಿರು ನಿಶಾನೆ ತೋರಿದ ಸಚಿವರು. ಈ ಹೊಸ ವಂದೇ ಭಾರತ್ ರೈಲು ಮಂಗಳೂರು ಮಾತ್ರವಲ್ಲದೆ ಮಡಗಾಂವ್‌ವರೆಗಿನ ಕರಾವಳಿ ಭಾಗದ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು-ಮುಂಬೈ ಸ್ಟೀಪರ್ ರೈಲು:ಇದೇ ಸಂದರ್ಭದಲ್ಲಿ ಮತ್ತೊಂದು ಪ್ರಮುಖ ಘೋಷಣೆ ಮಾಡಿದ ಸಚಿವರು, ಬೆಂಗಳೂರು ಮತ್ತು ಮುಂಬೈ ನಡುವೆ ‘ವಂದೇ ಭಾರತ್ ಸ್ವೀಪರ್’ ರೈಲು ಸೇವೆಯನ್ನು ಶೀಘ್ರದಲ್ಲೇ ಪ್ರಾರಂಭಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಇದು ದೂರದ ಪ್ರಯಾಣಿಕರಿಗೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಆರಾಮದಾಯಕ ಪ್ರಯಾಣವನ್ನು ಒದಗಿಸಲಿದೆ.
ಕರ್ನಾಟಕದಲ್ಲಿ ರೈಲ್ವೆ ಜಾಲ:ಪ್ರಸ್ತುತ ಕರ್ನಾಟಕದಲ್ಲಿ ಒಟ್ಟು 12 ಜೋಡಿ ವಂದೇ ಭಾರತ್ ರೈಲುಗಳು ಯಶಸ್ವಿಯಾಗಿ ಸಂಚರಿಸುತ್ತಿವೆ. ರಾಜ್ಯದ ರೈಲ್ವೆ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.
ಬೆಂಗಳೂರು-ಮಂಗಳೂರು ನಡುವಿನ ಈ ಹೊಸ ರೈಲುಸಂಚಾರದಿಂದಾಗಿ ವ್ಯಾಪಾರ, ಪ್ರವಾಸೋದ್ಯಮ ಮತ್ತುದೈನಂದಿನ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆಎಂದು ನಿರೀಕ್ಷಿಸಲಾಗಿದೆ.













































