ಸಫಾರಿ | ತೆರೆದ ವಾಹನಗಳಿಗೆ ಅವಕಾಶವಿಲ್ಲ: ಸುರಕ್ಷಿತ ಬಸ್‌ ಬಳಸಲು ಖಂಡ್ರೆ ಸೂಚನೆ

Picture of Savistara

Savistara

Bureau Report

ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ, ಕೆ.ಗುಡಿ ಸೇರಿದಂತೆ ರಾಜ್ಯದ ವಿವಿಧ ವನ್ಯಜೀವಿಧಾಮ ಮತ್ತು ಕಾನನಗಳಲ್ಲಿ ಸಫಾರಿ ನಡೆಯುತ್ತಿದ್ದು, ರಾಜ್ಯದ ಮೂಲೆಮೂಲೆಗಳಿಂದ ಅಷ್ಟೇ ಅಲ್ಲದೆ ದೇಶ ವಿದೇಶಗಳಿಂದಲೂ ಪ್ರವಾಸಿಗರು, ವನ್ಯಜೀವಿ ಪ್ರಿಯರು ಇಲ್ಲಿಗೆ ಆಗಮಿಸುತ್ತಾರೆ.ಅದೃಷ್ಟವಶಾತ್ ಈವರೆಗೆ ಸಫಾರಿ ಪ್ರದೇಶಗಳಲ್ಲಿ ಆನೆಗಳು, ಹುಲಿಗಳು ಸೇರಿದಂತೆ ಯಾವುದೇ ವನ್ಯಮೃಗಗಳು ಸಫಾರಿ ವಾಹನಗಳ ಮೇಲೆ ದಾಳಿ ಮಾಡಿ ಜೀವಹಾನಿ ಮಾಡಿದ ಘಟನೆಗಳು ಸಂಭವಿಸಿರುವುದಿಲ್ಲ. ಆದಾಗ್ಯೂ ಅನಾಹುತ ಸಂಭವಿಸುವ ಮೊದಲೇ ಎಚ್ಚೆತ್ತುಕೊಳ್ಳುವ ಅಗತ್ಯವಿದೆ ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!