ಬೆಂಗಳೂರು : ಬೃಹತ್ ಡ್ರಗ್ಸ್‌ ಜಾಲ ಪತ್ತೆ :35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

Picture of Savistara

Savistara

Bureau Report

ಬೆಂಗಳೂರು: ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ.ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ.ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು ನಾನಾ ದಾರಿಗಳನ್ನು ಕಂಡುಕೊಂಡಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ.

ದೆಹಲಿಯಿಂದ ರೈಲಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿಗಳು ಮಾದಕ ವಸ್ತುವನ್ನು ಟೇಬಲ್ ಮತ್ತು ಚೇರ್‌ಗಳಲ್ಲಿ ಅಡಗಿಸಿಟ್ಟು ಎಂಡಿಎಂಎ ತಂದಿದ್ದರು. ಗಿಫ್ಟ್ ರೀತಿಯಲ್ಲಿ ಪ್ಯಾಕ್ ಮಾಡಿ ತಂದಿದ್ದು, ಅದನ್ನ ಕಾಲೇಜುಗಳು, ಐಷಾರಾಮಿ ಏರಿಯಾಗಳಲ್ಲಿ ಕಾರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಪೊಲೀಸರು ಖಚಿತ ಮಾಹಿತಿ ಆಧಾರಿಸಿ ದಾಳಿ ನಡೆಸಿ, ಹದಿನೇಳು ಕೆಜಿ ಡ್ರಗ್ ವಶಕ್ಕೆ ಪಡೆದಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!