ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ಕಾಂಗ್ರೆಸ್‌ ಸಾಧನೆ – ಸಂಸದ ಬ್ರಿಜೇಶ್ ಚೌಟ

Picture of Savistara

Savistara

Bureau Report

ಮಂಗಳೂರು: ಅಭಿವೃದ್ಧಿ ಹೊಂದುತ್ತಿದ್ದ ರಾಜ್ಯವನ್ನು ಮೂರು ವರ್ಷಗಳಲ್ಲಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು.ನಿರ್ವಹಣೆಯಿಂದಾಗಿ ರಾಜ್ಯ ಸರ್ಕಾರದ ತಪ್ಪು ಆರ್ಥಿಕ ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಹಣಕಾಸಿನ ಶಿಸ್ತು ಇತ್ತು. ಇಂದಿನ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಆರ್ಥಿಕ ಕೊರತೆ ಎದುರಿಸುತ್ತಿದೆ. ಈ ಅಂಶ ಮಹಾಲೇಖ ಪಾಲರ ವರದಿಯಲ್ಲಿ ಉಲ್ಲೇಖವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಾವ ಸಾಧನೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಸಾಧನಾ ಸಮಾವೇಶ ಎಂದು ಪ್ರಶ್ನಿಸಿದ ಅವರು, ಆರ್ಥಿಕ ಶಿಸ್ತು ಕಾಪಾಡಲಾಗದೆ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ. ರಾಜ್ಯವನ್ನು ಕಾಂಗ್ರೆಸ್ ಹೈಕಮಾಂಡ್ ಎಟಿಎಂ ರೀತಿಯಲ್ಲಿ ಬಳಸಿಕೊಂಡು ಜನರನ್ನು ಸಾಲದ ಕೂಪಕ್ಕೆ ತಳ್ಳುತ್ತಿದೆ ಎಂದರು.ಕೇಂದ್ರದ ಯೋಜನೆಯಲ್ಲಿ ಅಸಡ್ಡೆ: ಕೇಂದ್ರ ಸರ್ಕಾರದ ಯೋಜನೆ ಜಾರಿಯಲ್ಲಿಅಸಡ್ಡೆ, ನಿರ್ಲಕ್ಷ್ಯ ವಹಿಸಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರದಿಂದ ಮಂಜೂರಾದ 6.38 ಲಕ್ಷ ಮನೆಗಳಲ್ಲಿ 3.86 ಲಕ್ಷ ಮನೆಗಳು ಮಾತ್ರ ಪೂರ್ಣಗೊಂಡಿವೆ. ಕ್ಷೀರಧಾರೆ ಯೋಜನೆಯಡಿ ಹೈನುಗಾರರಿಗೆ ನೀಡಬೇಕಾಗಿದ್ದ ಸಬ್ಸಿಡಿ ಹಣ 800 ಕೋಟಿ ರೂ. ಬಾಕಿ ಇರಿಸಲಾಗಿದೆ. ತಿಂಗಳಿಗೆ 110 ಕೋಟಿ ರೂ. ರಾಜ್ಯ ಸರ್ಕಾರ ಇದಕ್ಕಾಗಿಯೇ ತೆಗೆದಿಡಬೇಕು. ಆದರೆ 9 ತಿಂಗಳಿನಿಂದ ನಯಾಪೈಸೆ ಬಿಡುಗಡೆ ಮಾಡಿಲ್ಲ. 15 ಸಾವಿರ ಕೋಟಿ ಕಾರ್ಪಸ್‌ ನಿಧಿಯನ್ನು ಅನ್ಯ ಉದ್ದೇಶಗಳಿಗೆ ಬಳಸಲಾಗಿದೆ ಎಂದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ, ಕಾರ್ಯದರ್ಶಿ ಸುಜಿತ್ ಪ್ರತಾಪ್, ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ.ಮಂಜುಳಾ ರಾವ್, ಕೋಶಾಧಿಕಾರಿ ಸಂಜಯ ಪ್ರಭು, ವಕ್ತಾರರಾದ ರಾಜಗೋಪಾಲ ರೈ, ಜೀವನ್, ಅರುಣ್ ಶೇಟ್, ದೊಂಬಯ್ಯ, ಮಾಧ್ಯಮ ವಕ್ತಾರ ಹೇಮಂತ್ ಶೇಟ್, ಕದ್ರಿ ಮನೋಹರ ಶೆಟ್ಟಿ ಇದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!