ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್‌ ಕುಮಾರ್‌ ಪುತ್ತೂರು

Picture of Savistara

Savistara

Bureau Report

ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಕೋರಿ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕರಾದ ಕಿಶೋರ್‌ ಕುಮಾರ್‌ ಪುತ್ತೂರು ರವರು ರಾಜ್ಯ ಗೃಹ ಸಚಿವರಾದ ಶ್ರೀ ಪರಮೇಶ್ವರ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಮನವಿಯಲ್ಲಿ ಪ್ರಮುಖವಾಗಿ ,

ಸಾರ್ವಜನಿಕರು ರಸ್ತೆ ಬದಿಯಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾ ಬಿಟ್ಟಿಯಾಗಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚುವುದರ ಜೊತೆಗೆ ಸಾರ್ವಜನಿಕ ಆರೋಗ್ಯಕ್ಕೂ ಗಂಭೀರ ಹಾನಿ ಉಂಟಾಗುತ್ತಿದೆ.

ಸ್ವಚ್ಛತೆ ಕಾಪಾಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಇದು ದೊಡ್ಡ ಅಡ್ಡಿಯಾಗಿದೆ.ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಅತ್ಯಾವಶ್ಯಕವಾಗಿದೆ. ವಿಶೇಷವಾಗಿ ಇಂತಹ ಕೃತ್ಯಗಳಲ್ಲಿ ತೊಡಗಿರುವವರ ಮೇಲೆ ದಂಡ ವಿಧಿಸುವುದರ ಜೊತೆಗೆ, ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತವಾಗಿ (Suo Moto) FIR ದಾಖಲಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕಾಗಿದೆ.

ಆದುದರಿಂದ, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡುವ ಮೂಲಕ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಹಾಗೂ ಸ್ವಚ್ಛತೆಯನ್ನು ಕಾಪಾಡುವಲ್ಲಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಕ್ರಮ ಕೈಗೊಳ್ಳಬೇಕಾಗಿ ಕೋರಿರುತ್ತಾರೆ.ಕಳೆದ ಬಜೆಟ್‌ ಅಧಿವೇಶನದಲ್ಲಿ ಕೂಡ ಶಾಸಕರು ಈ ಬಗ್ಗೆ ಶೂನ್ಯ ವೇಳೆಯಲ್ಲಿ ಸದರಿ ವಿಷಯ ಪ್ರಸ್ತಾಪಿಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಆಗ್ರಹಿಸಿದ್ದರು.

ಕೇಂದ್ರ ಸರಕಾರವು ಸಂಪೂರ್ಣ ಸ್ವಚ್ಛತಾ ಆಂದೋಲನ (TSC), ನಿರ್ಮಲ್‌ ಭಾರತ್‌ ಅಭಿಯಾನ(NBA), ಸ್ವಚ್ಛ ಭಾರತ್‌ ಮಿಷನ್‌(SBM) ಮುಂತಾದ ಹಲವಾರು ಯೋಜನೆಗಳ ಮೂಲಕ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಲು ಉತ್ತಮ ಉಪಕ್ರಮಗಳನ್ನು ಕೈಗೊಂಡಿದೆ. ಸ್ವಚ್ಛ ಭಾರತ್‌ ಮಿಷನ್‌ ನಡಿ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯತಿಗಳಲ್ಲಿ ಘನ ತ್ಯಾಜ್ಯ ಘಟಕವನ್ನು ನಿರ್ಮಿಸಿ ಮನೆಗಳಿಂದ ಒಣ ಮತ್ತು ಹಸಿ ಕಸವನ್ನು ಸಂಗ್ರಹಿಸಲಾಗುತ್ತಿದೆ.

ನಗರ ಪ್ರದೇಶಗಳಲ್ಲೂ ಕಸ ಸಂಗ್ರಹಣೆಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಅದಲ್ಲದೆ ರಾಮಕೃಷ್ಣ ಮಿಷನ್‌ ಮಂಗಳೂರು ಮತ್ತು ಜನ ಶಿಕ್ಷಣ ಟ್ರಸ್ಟ್‌ ಮುಡಿಪು ನಂತಹ ಸ್ವಯಂ ಸೇವಾ ಸಂಸ್ಥೆಗಳು ಸಹ ಸ್ವಚ್ಚತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿಯಾನದ ಯಶಸ್ಸಿಗೆ ನಿರಂತರವಾಗಿ ಪ್ರಯತ್ನಿಸುತ್ತಿದೆ.

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

[t4b-ticker]
error: Content is protected !!