ಉಚಿತ ವಸತಿ ಪಿಯು ಶಿಕ್ಷಣದ ಜೊತೆಗೆ ನೀಟ್, ಜೆಇಇ ತರಬೇತಿ!

Picture of Savistara

Savistara

Bureau Report

ಬೆಂಗಳೂರು: ರಾಜ್ಯದ ಸರಕಾರಿ ಶಾಲೆಗಳ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ವಸತಿಸಹಿತ ಪಿಯು ವಿಜ್ಞಾನ ಶಿಕ್ಷಣದೊಂದಿಗೆ ನೀಟ್‌, ಜೆಇಇ ಹಾಗೂ ಸಿಇಟಿ ಉಚಿತ ತರಬೇತಿ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಕಾನೂನು ಸಚಿವ ಎಚ್‌.ಕೆ.

ಪಾಟೀಲ್‌ ಈ ವಿಷಯ ತಿಳಿಸಿದರು. ಸರಕಾರಿ ಶಾಲೆಗಳಲ್ಲಿ ಓದಿ 10ನೇ ತರಗತಿ ಬೋರ್ಡ್‌ ಪರೀಕ್ಷೆಯ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಒಟ್ಟು 500 ವಿದ್ಯಾರ್ಥಿಗಳನ್ನು ಈ ಯೋಜನೆಗೆ ಆಯ್ಕೆ ಮಾಡಲಾಗುತ್ತದೆ. ಪ್ರತಿ ಜಿಲ್ಲೆಯಿಂದ 15 ವಿದ್ಯಾರ್ಥಿಗಳಿಗೆ ಈ ವಿಶೇಷ ಸೌಲಭ್ಯ ಸಿಗಲಿದೆ. ಇದೇ ವೇಳೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ (ಐಸಿಡಿಎಸ್‌) ರಾಜ್ಯದ 69,922 ಅಂಗನವಾಡಿ ಕೇಂದ್ರಗಳಿಗೆ ಶಾಲಾಪೂರ್ವ ಶಿಕ್ಷಣ ಕಿಟ್‌ಗಳನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ. ಪ್ರತಿ ಕೇಂದ್ರಕ್ಕೆ ತಲಾ 3,000 ರೂ.ನಂತೆ ಒಟ್ಟು 20.98 ಕೋ. ರೂ. ವೆಚ್ಚದಲ್ಲಿ ಈ ಕಿಟ್‌ಗಳನ್ನು ಪೂರೈಸಲು ಸರ್ಕಾರ ಅವಕಾಶ ಕಲ್ಪಿಸಿದೆ ಎಂದು ಸಚಿವರು ವಿವರಿಸಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!