ಮಂಗಳೂರು ವಿಮಾನ ನಿಲ್ದಾಣ ಸಮೀಪ ರೈಲು ನಿಲ್ದಾಣ ನಿರ್ಮಾಣ; ಕಾರ್ಯಸಾಧ್ಯತೆ ಅಧ್ಯಯನ

Picture of Savistara

Savistara

Bureau Report

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್‌ ಭಾರತ್ ಸ್ಟೇಷನ್ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ ಅಧ್ಯಯನ ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕರಾವಳಿ ಮತ್ತು ರಾಜಧಾನಿ ಜನರ ಬಹುದಿನಗಳ ಕನಸಾಗಿದ್ದ ಮಂಗಳೂರು- ಬೆಂಗಳೂರು ನಡುವಿನ ‘ ವಂದೇ ಭರತ್ ಎಕ್ಸ್ಪ್ರೆಸ್ ರೈಲು ಸಂಚಾರವು ಇನ್ನು ಕೇವಲ ಒಂದು ತಿಂಗಳೊಳಗೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಹಾಸನ ಮತ್ತು ಮಂಗಳೂರು ನಡುವಿನ ಘಾಟ್ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡ ಬೆನ್ನಲ್ಲೇ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರ ಬೇಡಿಕೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ಇದಕ್ಕೆ ನಿಲುಗಡೆ ನೀಡಲಾಗುವುದು ಎಂದು ಸಚಿವರು ಭರವಸೆ ನೀಡಿದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!