ಬಿಜೆಪಿಯ ಹಿಂದೂ-ಮುಸ್ಲಿಂ ಧ್ರುವೀಕರಣದ ಆಟ ಹೆಚ್ಚು ಕಾಲ ನಡೆಯಲ್ಲ: ರಾಹುಲ್ ಗಾಂಧಿ

Picture of Savistara

Savistara

Bureau Report

ನವದೆಹಲಿ: ‘ಬಿಜೆಪಿಯ ಹಿಂದೂ-ಮುಸ್ಲಿಂ ಧ್ರುವೀಕರಣದ ಆಟ ಹೆಚ್ಚು ಕಾಲ ನಡೆಯಲ್ಲ’ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ರಾಷ್ಟ್ರೀಯ ಸಲಹಾ ಮಂಡಳಿಯ ಮೊದಲ ಸಭೆಯಲ್ಲಿ ರಾಹುಲ್ ಈ ಕುರಿತು ಮಾತನಾಡಿದ್ದಾರೆ. ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.ಬಿಜೆಪಿಯ ಹಿಂದೂ-ಮುಸ್ಲಿಂ ಧ್ರುವೀಕರಣವನ್ನು ತಡೆಯಲು ಕಾಂಗ್ರೆಸ್ ಕಾರ್ಯತಂತ್ರದ ಬಗ್ಗೆ ನಾಯಕರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದ್ದಾರೆ.ಜನರು ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟು ಬಿಜೆಪಿಯ ಹಿಂದೂ-ಮುಸ್ಲಿಂ ಧ್ರುವೀಕರಣವನ್ನು ಮೀರಿಸಲಿದೆ ಎಂದು ರಾಹುಲ್ ಹೇಳಿದ್ದಾರೆ.

ಶ್ರೀಮಂತರು-ಬಡವರ ನಡುವಿನ ಅಂತರ ಹೆಚ್ಚುತ್ತಿದೆ. ಜನರು ಶೀಘ್ರದಲ್ಲೇ ‘ಆಹಾರ ಎಲ್ಲಿದೆ’ ಎಂದು ಕೇಳಲು ಪ್ರಾರಂಭಿಸುತ್ತಾರೆ ಎಂದು ಹೇಳಿದ್ದಾರೆ.ಪಶ್ಚಿಮ ಏಷ್ಯಾ ಬಿಕ್ಕಟ್ಟು ಹಾಗೂ ಅಂತರರಾಷ್ಟ್ರೀಯ ಬೆಳವಣಿಗೆಗಳಿಂದ ತೀವ್ರ ಆರ್ಥಿಕ ಬಿಕ್ಕಟ್ಟು ತಲೆದೋರಿದೆ. ಮೋದಿ ಸರ್ಕಾರಕ್ಕೆ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!