ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್‌ನ ಹಿರಿಯ ರಾಜಕಾರಣಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.
ದೆಹಲಿಯಲ್ಲಿ ಖರ್ಗೆ ಅವರನ್ನು ಭೇಟಿಯಾಗಿರುವ ಡಿಕೆಶಿ ಮಾತುಕತೆ ನಡೆಸಿದ್ದಾರೆ. ಈ ಸಂಬಂಧ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಖರ್ಗೆ ಅವರನ್ನು ಆಲಿಂಗಿಸಿಕೊಂಡ ಡಿಕೆಶಿ, ಒಗ್ಗಟ್ಟಿನ ಸಂದೇಶ ರವಾನಿಸಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ರಾತ್ರಿ ದೆಹಲಿಗೆ ತೆರಳಿದ್ದರು. ಪಕ್ಷದ ವರಿಷ್ಟರೊಂದಿಗೆ ಸಮಾಲೋಚನೆ ನಡೋಸಿದ್ದಾರೆ.ಮೂರು ವರ್ಷಗಳ ಆಡಳಿತ ಪೂರೈಸಿರುವ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಡಿ.ಕೆ. ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವುದು ಬಹುತೇಕ ಖಚಿತವೆನಿಸಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ನಡೆಯಲಿದೆ. ಆ ಸಭೆಯಲ್ಲಿ, ಮುಂದಿನ ನಾಯಕನ ಆಯ್ಕೆಯನ್ನು ಘೋಷಿಸಿ, ಅನುಮೋದನೆ ಪಡೆಯಲಾಗುತ್ತದೆ.ಆಯ್ಕೆಯಾದ ನಾಯಕ, ತಮಗೆ ಬಹುಮತ ಇದೆ ಎಂದು ದೃಢಪಡಿಸಲು ಶಾಸಕರ ಸಹಿ ಇರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿ, ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೋರಬೇಕು.ಅದಾದ ನಂತರವಷ್ಟೇ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.










































