ಧರ್ಮಸ್ಥಳ: ಭಾರತದ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರು ನಿನ್ನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅವರು ಇಂದು ಭಾನುವಾರದಂದು ಧರ್ಮಸ್ಥಳ ಸಿರಿ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಸಂಜೆ 6 ಗಂಟೆ ಸುಮಾರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ಧರ್ಮಸ್ಥಳದಲ್ಲಿ ಡಿ ಹರ್ಷೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ದೇವಾಲಯದ ಆವರಣದಲ್ಲಿ ಸ್ವಾಗತ ಕೋರಿದ ಬಳಿಕ ದೇವಸ್ಥಾನದ ಸನ್ನಿಧಿ ವಸತಿಗೃಹಕ್ಕೆ ತೆರಳಿದರು. ಸನ್ನಿಧಿ ಅತಿಥಿ ಗೃಹದಲ್ಲಿ ಸಂಸದ ಬೃಜೇಶ್ ಚೌಟ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ಅವರು ಉಪ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನಂತರ ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸುರೇಂದ್ರ ಕುಮಾರ್, ಶ್ರೇಯಸ್ ಕುಮಾರ್ ಅವರು ಉಪ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಉಭಯಕುಶಲೋಪರಿ ವಿಚಾರಿಸಿದರು.
ಬಿಗಿ ಭದ್ರತೆ: ಉಪರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಮೇ 30 ಮತ್ತು31 ರಂದು ಧರ್ಮಸ್ಥಳ ಸುತ್ತಮುತ್ತ 1500 ಮೀ ವ್ಯಾಪ್ತಿಯನ್ನು ‘ನೋ ಡೋನ್ ಝೂನ್’ ಎಂದು ಘೋಷಿಸಲಾಗಿತ್ತು. ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರುವರು.









































