ಬಿಜೆಪಿಗೆ ಅಣ್ಣಾಮಲೈ ಗುಡ್ ಬೈ: ಮುಂದಿನ ನಡೆ ಏನು?

Picture of Savistara

Savistara

Bureau Report

ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾದ ಅಣ್ಣಾಮಲೈ ಮಂಗಳವಾರ (ಜೂನ್ 2) ರಾಜೀನಾಮೆ ಪತ್ರ ಸಲ್ಲಿಸಿದರು.

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೈನಾ‌ರ್ ನಾಗೇಂದ್ರನ್ ಅವರನ್ನು ನೇಮಿಸಿದಾಗಿನಿಂದ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಅವರಿಗೆ ಬಿಜೆಪಿಯಲ್ಲಿ ಇನ್ನು ಭವಿಷ್ಯವಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಧ್ಯಕ್ಷ ನಿತಿನ್ ನಬಿನ್ ಮತ್ತು ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೊಂದಿಗಿನ ನಿರ್ಣಾಯಕ ಸಭೆಯಲ್ಲಿ ಅಣ್ಣಾಮಲೈ ಪಕ್ಷದಿಂದ ದೂರವಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಬಿಜೆಪಿ ತೊರೆದು ತಮ್ಮದೇ ಆದ ಹೊಸ ಆಂದೋಲನವನ್ನು ರೂಪಿಸಿಕೊಳ್ಳಲು ಬಯಸುವುದಾಗಿ ಪಕ್ಷದ ನಾಯಕತ್ವಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.ನಟ-ರಾಜಕಾರಣಿ ವಿಜಯ್ ಅವರು ಸಿನಿಮಾ ತೊರೆದು ತಮಿಳುನಾಡು ಮುಖ್ಯಮಂತ್ರಿಯಾಗಿ ಉತ್ತುಂಗಕ್ಕೇರಿದ ನಂತರ, ಅಣ್ಣಾಮಲೈ ಅವರು ಬಿಜೆಪಿಯಿಂದ ನಿರ್ಗಮಿಸುತ್ತಿರುವುದು ರಾಜ್ಯದಲ್ಲಿ ಪ್ರಮುಖ ರಾಜಕೀಯ ಬದಲಾವಣೆಯನ್ನು ಸೂಚಿಸಿದೆ.

ನಟ ವಿಜಯ್ ರಾಜಕೀಯ ಶಕ್ತಿಯಾಗಿ ಉದಯಿಸಿದ ನಂತರ ತಮಿಳುನಾಡಿನ ರಾಜಕೀಯದಲ್ಲಿ ಅಪಾರ ಬದಲಾವಣೆಗಳನ್ನು ತಂದಿದೆ. ಇಂದಿನ ಸದ್ಯದ ಪರಿಸ್ಥಿತಿಯಲ್ಲಿ ವಿಜಯ್ ವಿರುದ್ಧ ಹೋರಾಡಲು ಯಾವುದೇ ನಾಯಕ ಇಲ್ಲ. ದ್ರಾವಿಡ ಯುಗ ಮುಗಿದಿದೆ. ಭಾಷಾ ವಿಷಯಗಳ ಮೇಲೆ ಮಾತ್ರ ಕೇಂದ್ರೀಕೃತವಾದ ರಾಜಕೀಯ ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ರಾಜ್ಯದ ರಾಜಕೀಯ ಬದಲಾಗಿದೆ ಎಂಬಂತಹ ಮಾತುಗಳು ಕೇಳಿಬರುತ್ತಿದೆ.

[t4b-ticker]
error: Content is protected !!