ಅಮಿತ್ ಶಾ ಭೇಟಿಯಾದ ಅಣ್ಣಾಮಲೈ; ರಾಜೀನಾಮೆ ಕುರಿತು ಚರ್ಚೆ

Picture of Savistara

Savistara

Bureau Report

ಹೊಸದಿಲ್ಲಿ, ಜೂ. 2: ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.ಇದಕ್ಕೂ ಮುನ್ನ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ ಪಕ್ಷದ ಹಿರಿಯ ನಾಯಕ ಬಿ.ಎಲ್‌. ಸಂತೋಷ್‌ ಅವರನ್ನು ಭೇಟಿಯಾಗಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ANI ಸುದ್ದಿ ಸಂಸ್ಥೆ ವರದಿ ಮಾಡಿದೆ.ತಮ್ಮ ರಾಜೀನಾಮೆಗೆ ಸಂಬಂಧಿಸಿದ ಬೆಳವಣಿಗೆಗಳ ಕುರಿತು ಅಣ್ಣಾಮಲೈ ಅವರು ಈ ಎಲ್ಲ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಅಮಿತ್ ಶಾ ಅವರೊಂದಿಗಿನ ಸಭೆಯ ಬಳಿಕ ಈ ಕುರಿತ ಸಮಾಲೋಚನೆ ಒಂದು ಹಂತಕ್ಕೆ ತಲುಪಿದೆ ಎನ್ನಲಾಗಿದೆ.

ಅಣ್ಣಾಮಲೈ ಅವರ ರಾಜೀನಾಮೆ ಕುರಿತು ಸಭೆಗಳಲ್ಲಿ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ. ಆದರೆ, ಅವರು ಇದುವರೆಗೆ ಯಾವುದೇ ಅಧಿಕೃತ ರಾಜೀನಾಮೆ ಸಲ್ಲಿಸಿಲ್ಲ ಎಂದು ಹೇಳಲಾಗಿದೆ.ಈ ನಡುವೆ, ಈ ಮಹತ್ವದ ವಿಷಯದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಮಂಗಳವಾರ ರಾತ್ರಿ ಅಣ್ಣಾಮಲೈ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದೆ.ಅಲ್ಲದೆ, ಅಣ್ಣಾಮಲೈ ಅವರು ಬುಧವಾರ ಅಥವಾ ಗುರುವಾರ ತಮಿಳುನಾಡಿನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆ ಇದ್ದು, ತಮ್ಮ ಮುಂದಿನ ರಾಜಕೀಯ ನಡೆ ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡುವ ನಿರೀಕ್ಷೆಯಿದೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!