ದೇಶದ ಅತ್ಯಂತ ಶ್ರೀಮಂತ ಸಿಎಂ ಹೆಗ್ಗಳಿಕೆ ಪಡೆಯಲಿರುವ ಡಿಕೆಶಿ ಒಟ್ಟು ಆಸ್ತಿ ಎಷ್ಟು ಗೊತ್ತಾ?

Picture of Savistara

Savistara

Bureau Report

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಅವರು ದೇಶದಲ್ಲೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೊಸ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಎಡಿಆರ್ ವರದಿಯಲ್ಲೇನಿದೆ?

ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥೆಯ ಇತ್ತೀಚಿನ ವರದಿಗಳು ಹಾಗೂ ಚುನಾವಣಾ ಅಫಿಡವಿಟ್‌ಗಳ ಪ್ರಕಾರ, ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಆಸ್ತಿ ಮೌಲ್ಯವನ್ನು ಹೋಲಿಸಿದರೆ ಡಿ.ಕೆ. ಶಿವಕುಮಾ‌ರ್ ಅವರು ಮೊದಲ ಸ್ಥಾನದಲ್ಲಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಡಿಕೆಶಿ ಸಲ್ಲಿಸಿದ್ದ ಆಸ್ತಿ ಘೋಷಣಾ ಪತ್ರದಲ್ಲಿ ತಮ್ಮ ಒಟ್ಟು ಆಸ್ತಿಯ ಮೌಲ್ಯ ಸುಮಾರು 1,413 ಕೋಟಿ ರೂಪಾಯಿ ಎಂದು ಉಲ್ಲೇಖಿಸಿದ್ದರು.

ಡಿಕೆಶಿ ಆಸ್ತಿಯ ವಿವರಗಳು:

ಒಟ್ಟು ಆಸ್ತಿ ಮೌಲ್ಯ: ₹1,413 ಕೋಟಿ

ಚರ ಆಸ್ತಿ: ₹273 ಕೋಟಿ

ಸ್ಥಿರ ಆಸ್ತಿ (ರಿಯಲ್ ಎಸ್ಟೇಟ್ ಮತ್ತು ಜಮೀನು): ₹1,140 ಕೋಟಿ

ಒಟ್ಟು ಸಾಲ: ₹265 ಕೋಟಿಗಿಂತ ಹೆಚ್ಚು

ವರದಿಗಳ ಪ್ರಕಾರ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿರುವ ಭೂಮಿ, ವಾಣಿಜ್ಯ ಕಟ್ಟಡಗಳು, ಜಾಗತಿಕ ತಾಂತ್ರಿಕ ಸಂಸ್ಥೆಗಳು (ಗ್ಲೋಬಲ್ ಅಕಾಡೆಮಿ ಆಫ್‌ ಟೆಕ್ನಾಲಜಿ), ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳು ಡಿಕೆಶಿ ಅವರ ಆಸ್ತಿಯ ಮುಖ್ಯ ಮೂಲಗಳಾಗಿವೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!