ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ

Picture of Savistara

Savistara

Bureau Report

ಡಿಕೆ ಶಿವಕುಮಾ‌ರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಕೆಪಿಸಿಸಿ ಅದ್ಯಕ್ಷರು ಯಾರಾಗುತ್ತಾರೆ ಎಂಬುದಕ್ಕೆ ತೆರೆ ಬಿದ್ದಿದೆ. ಇಂದು ಕಾಂಗ್ರೆಸ್ ಹೈಕಮಾಂಡ್‌ನಿಂದಲೇ ಕಾಂಗ್ರೆಸ್‌ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಅವರ ಆಯ್ಕೆ ಆಗಿದೆ.ಕಾ೦ಗ್ರೆಸ್‌ ವರಿಷ್ಠರಿಂದಲೇ ಇಂದು ಬುಧವಾರ ಬೆಳಗ್ಗೆ ದೂರವಾಣಿ ಕರೆ ಬ೦ದಿದೆ. ನಾಯಕರೊಂದಿಗೆ ಮಾತನಾಡಿದ ಬಿಕೆ. ಹರಿಪ್ರಸಾದ್ ಅವರು ವರಿಷ್ಠ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹೊಸ ಜವಾಬ್ದಾರಿ ನಿರ್ವಹಣೆಗೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾ‌ರ್ ಅವರ ಪದಗ್ರಹಣ ದಿನವೇ ಅವರು ನಿರ್ವಹಿಸಿದ್ದ ಕೆಪಿಸಿಸಿ ಸ್ಥಾನಕ್ಕೆ ಹೊಸ ಸಾರಥಿಯ ನೇಮಕವಾಗಿದೆ.ರಾಹುಲ್ ಗಾಂಧಿ, ಸೋನಿಯಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಬಿಕೆ ಹರಿಪ್ರಸಾದ್ ಅವರಿಗೆ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೊಣೆ ನೀಡಿದರು. ಹೈಕಮಾಂಡ್‌ನ ಈ ನಿರ್ಧಾರವು ಇತ್ತ ಕೆಪಿಸಿಸಿ ಅಧ್ಯಕ್ಷಗಿರಿಗೆ ಏರುವ ಕನಸು ಕಂಡಿದ್ದ ಉತ್ತರ ಕರ್ನಾಟಕದ ಕಾಂಗ್ರೆಸ್ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಆಘಾತ ನೀಡಿದಂತಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಲಂಕರಿಸಲು ಒಂದಷ್ಟು ಕಸರತ್ತು ನಡೆಸಿದ್ದರು. ಈ ಸಂಬಂಧ ದೆಹಲಿ ಮಟ್ಟದಲ್ಲಿ ಲಾಭಿ ನಡೆಸಿದ್ದರು. ಆದರೆ ಆ ಹುದ್ದೆ ಬಿಕೆ ಹರಿಪ್ರಸಾದ್ ಅವರ ಪಾಲಾಗುತ್ತಿದ್ದಂತೆ ಅವರ ಕನಸಿಗೆ ತಣ್ಣೀರೆರಚಿದಂತಾಗಿದೆ.ಹೀಗಾಗಿ ಸತೀಶ್ ಜಾರಕಿಹೊಳಿ ಅವರ ಮುಂದಿನ ನಡೆ ಬಗ್ಗೆ ಕೂತೂಹಲ ಸೃಷ್ಟಿಯಾಗಿದೆ.

[t4b-ticker]
error: Content is protected !!