ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಭಗವದ್ಗೀತೆ ಶ್ಲೋಕವನ್ನು ಡಿಕೆಶಿ ಹಂಚಿಕೊಂಡಿದ್ದಾರೆ.
‘ಕರ್ಮಣೇವಾಧಿಕಾರಸ್ತೇ ಮಾ ಫಲೇಷು ಕದಾಚನ | ಮಾ ಕರ್ಮಫಲಹೇತುರ್ಭೂರ್ ಮಾ ತೇ ಸಂಗೋಸ್ತ್ರ ಕರ್ಮಣಿ ||’ ಎಂಬ ಶ್ಲೋಕ ಹಂಚಿದ್ದಾರೆ.
ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಪ್ರಮಾಣವಚನ ಬೋಧಿಸಿದರು.
ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು, ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು.ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹಾಗೂ 12ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.










































