ಸ್ಪಂದನ ಚಾರಿಟೇಬಲ್ ಟ್ರಸ್ಟ್ (ರಿ.)ಬೆಂಗಳೂರು ಇವರ 19ನೇ ಯೋಜನೆಯಾದ ಸ್ಪಂದನ ವಿದ್ಯಾನಿಧಿ ಯೋಜನೆಯ ಮುಖಾಂತರ ಬೆಳ್ತಂಗಡಿ ತಾಲೂಕಿನ ಶಾಲೆಗಳಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಚ್ಚಾಡಿ ಗರ್ಡಾಡಿ ಗ್ರಾಮ, ಕಿರಿಯ ಸರಕಾರಿ ಪ್ರಾಥಮಿಕ ಶಾಲೆ ಸರ್ಕಾರಿ ಪಿಲ್ಲಂಬುಗೊಳಿ, ಆರಂಬೋಡಿ ಗ್ರಾಮ ಹಾಗೂ ಉಡುಪಿ ಜಿಲ್ಲೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ನೂರಾಲ್ಪೆಟ್ಟು,ಕಾರ್ಕಳ ತಾಲೂಕಿನ ಒಟ್ಟು 62 ವಿದ್ಯಾರ್ಥಿ/ನೀ ಯರಿಗೆ ಉಚಿತವಾಗಿ ಶಾಲಾ ಬ್ಯಾಗ್, ಪುಸ್ತಕ ಮತ್ತು ಛತ್ರಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸ್ಪಂದನ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು,ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, SDMC ಮತ್ತು ಹಳೆ ವಿದ್ಯಾರ್ಥಿ ಸಂಘದ ಮುಖಂಡರುಗಳು ಉಪಸ್ಥಿತರಿದ್ದರು.










































